ನವದೆಹಲಿ: ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ಪೈಶಾಚಿಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಬುಧವಾರ ಬೆಳಗ್ಗೆ ದೆಹಲಿಗೆ ಮರಳಿದ್ದಾರೆ. ಅವರು ನಿಗದಿತ ಅಧಿಕೃತ ಭೋಜನ ಕೂಟಕ್ಕೆ ಹಾಜರಾಗದೆ, ಮಂಗಳವಾರ ರಾತ್ರಿ ಜೆಡ್ಡಾದಿಂದ ಹೊರಟಿದ್ದಾರೆ.
ಬುಧವಾರ ಬೆಳಗ್ಗೆ ನಡೆಯುವ ಭದ್ರತಾ ಸಂಬಂಧಿತ ಸಂಪುಟ ಸಮಿತಿ ಸಭೆಗೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜೆಡ್ಡಾದಲ್ಲಿ ನಡೆದ ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಿ ಮೋದಿ ಹಾಗೂ ಸೌದಿ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಪಹಲ್ಗಾಮ್ ದಾಳಿಯ ಬಗ್ಗೆ ಚರ್ಚಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.