ಬೆಂಗಳೂರು: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಬಳಿಕ ಭಾರತೀಯ ಸೇನೆ ಉಗ್ರರ 9 ನೆಲೆಗಳನ್ನು ನಾಶಮಾಡಿದೆ. ಈ ಹಿನ್ನೆಲೆಯಲ್ಲಿ ಭಾರತ–ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲೂ ಮುಂಜಾಗ್ರತಾ ಕ್ರಮವಾಗಿ ಪೊಲೀಸರ ಹೆಚ್ಚುವರಿ ರಜೆ ರದ್ದುಗೊಳಿಸಲಾಗಿದೆ. ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ: “ದೇಶದಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಯಾವುದೇ ಕ್ಷಣದಲ್ಲಿ ಏನಾಗಬಹುದು, ಹಾಗಾಗಿ ಹೆಚ್ಚುವರಿ ರಜೆ ಇರುವುದಿಲ್ಲ.” ಕೋಸ್ಟಲ್ ಗಾರ್ಡ್ನಲ್ಲಿ ಭದ್ರತೆಯನ್ನು ಬಲಪಡಿಸಲಾಗಿದೆ. ಕೇಂದ್ರದ ನಿರ್ದೇಶನದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.