Tuesday, May 20, 2025
Google search engine

Homeರಾಜ್ಯCBSE 12ನೇ ತರಗತಿ ಫಲಿತಾಂಶ ಪ್ರಕಟ : ಈ ಬಾರಿಯೂ ಬಾಲಕಿಯರೇ ಮೇಲುಗೈ

CBSE 12ನೇ ತರಗತಿ ಫಲಿತಾಂಶ ಪ್ರಕಟ : ಈ ಬಾರಿಯೂ ಬಾಲಕಿಯರೇ ಮೇಲುಗೈ

ದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 12ನೇ ತರಗತಿಯ ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು CBSE–ನ ವೆಬ್‌ಸೈಟ್‌ cbse.gov.in ಮೂಲಕ ಪರಿಶೀಲಿಸಬಹುದು.

ಈ ಬಾರಿ ಸಿಬಿಎಸ್‌ಇ 12ನೇ ತರಗತಿಯ ಫಲಿತಾಂಶದಲ್ಲಿ ನಿರೀಕ್ಷಿತ ರೀತಿಯ ಯಶಸ್ಸು ಕಂಡಿದ್ದು, 1.15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇಕಡಾ 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಇದರ ಜೊತೆಗೆ 24,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇ. 95ಕ್ಕಿಂತ ಹೆಚ್ಚು ಅಂಕ ಪಡೆಯುವ ಮೂಲಕ ಅತ್ತೈಶಯ ಸಾಧನೆ ಮಾಡಿದ್ದಾರೆ.

ಇದೇ ವೇಳೆ 1.29 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನಗಳನ್ನು ಪಡೆದು ತಮ್ಮ ಶೈಕ್ಷಣಿಕ ಬೆಳವಣಿಗೆಗೆ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಸಿಬಿಎಸ್‌ಇಯು ಈ ಬಾರಿ ಫಲಿತಾಂಶ ಪ್ರಕಟಣೆ ಪ್ರಕ್ರಿಯೆಯನ್ನು ಸಮಯಕ್ಕೆ ಸರಿಯಾಗಿ ಮುಗಿಸಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಫಲಿತಾಂಶಗಳನ್ನು ಆನ್‌ಲೈನ್‌ನಲ್ಲಿ ಸುಲಭವಾಗಿ ನೋಡಿಕೊಳ್ಳಬಹುದಾಗಿದೆ.

ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣದ ಆಯ್ಕೆಗಳಿಗೆ ಇದು ಮಹತ್ವದ ಹಂತವಾಗಿದ್ದು, ವಿವಿಧ ಹತ್ತಿರದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ.

RELATED ARTICLES
- Advertisment -
Google search engine

Most Popular