ಮಂಗಳೂರು (ದಕ್ಷಿಣ ಕನ್ನಡ) :ಸಿಎಂ ಸಿದ್ದರಾಮಯ್ಯ ಅವರು ಇಂದು ಸಂಜೆ ಮಂಗಳೂರಿಗೆ ಭೇಟಿ ನೀಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.
ಉರ್ವ ಮಾರ್ಕೆಟ್‌ನಲ್ಲಿ ನಿರ್ಮಾಣಗೊಂಡ ಒಳಾಂಗಣ ಕ್ರೀಡಾಂಗಣವನ್ನು ಉದ್ಘಾಟಿಸಿದ ಸಿಎಂ, ನಂತರ ಪಡೀಲ್‌ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ “ಪ್ರಜಾಸೌಧ” ಉದ್ಘಾಟನೆ ನೆರವೇರಿಸಿದರು. ಐತಿಹಾಸಿಕ ದರ್ಖಾಸ್ತು ಪೋಡಿ ಅಭಿಯಾನದ ಅಂಗವಾಗಿ 8000 ಜನರಿಗೆ ಆರ್.ಟಿ.ಸಿ ವಿತರಣೆ ಮಾಡಲಾಯಿತು.

ಅಲ್ಲದೆ, ಗುರುಪುರ ನಾಡಕಚೇರಿ, ಸಣ್ಣ ನೀರಾವರಿ ಇಲಾಖೆ ಕಛೇರಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನಡೆಸಿದರು. ವಿವಿಧ ಸರಕಾರಿ ಸವಲತ್ತು ವಿತರಣೆ ಕಾರ್ಯಕ್ರಮಕ್ಕೂ ಅವರು ಹಾಜರಾಗಿ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿದರು.
ಪ್ರತಿಯಿಂದು 5 ವರ್ಷಗಳಿಗೊಮ್ಮೆ ನಡೆಯುವ ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲೂ ಸಿಎಂ ಭಾಗವಹಿಸಿದರು.
ಈ ಕಾರ್ಯಕ್ರಮಗಳಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಭಾಗವಹಿಸಿದ್ದರು.
ರಾತ್ರಿ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಮರಳಲಿದ್ದಾರೆ.