Wednesday, May 21, 2025
Google search engine

Homeಅಪರಾಧವಿದೇಶ ಉದ್ಯೋಗದ ಹೆಸರಿನಲ್ಲಿ ಕೋಟಿ ರೂ. ವಂಚನೆ: ಪ್ರಮುಖ ಆರೋಪಿ ಮಸೀವುಲ್ಲಾ ಖಾನ್ ಸಿಸಿಬಿ ವಶಕ್ಕೆ

ವಿದೇಶ ಉದ್ಯೋಗದ ಹೆಸರಿನಲ್ಲಿ ಕೋಟಿ ರೂ. ವಂಚನೆ: ಪ್ರಮುಖ ಆರೋಪಿ ಮಸೀವುಲ್ಲಾ ಖಾನ್ ಸಿಸಿಬಿ ವಶಕ್ಕೆ

ಮಂಗಳೂರು (ದಕ್ಷಿಣ ಕನ್ನಡ): ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ದೂರುದಾರರಿಂದ 1,65,000/- ಹಣವನ್ನು ಪಡೆದು ಅಲ್ಲದೇ ಸಾಕಷ್ಟು ಯುವಕರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸುಮಾರು 1 ಕೋಟಿ 82 ಲಕ್ಷ ರೂಪಾಯಿ ಹಣವನ್ನು ಪಡೆದು ನಂಬಿಕೆ ದ್ರೋಹ ವಂಚಿಸಿದ್ದಕ್ಕಾಗಿ ಮಂಗಳೂರು ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಸಿಸಿಬಿ ಘಟಕದಲ್ಲಿ ತನಿಖೆಯಲ್ಲಿರುತ್ತದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಂಬಯಿಯ ವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್ ಎಂಬಾತನನ್ನು ಹೆಚ್ಚಿನ ತನಿಖೆ ಸಲುವಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಈ ಮೇಲಿನ ಆರೋಪಿಯ ವಿರುದ್ದ ಈಗಾಗಲೇ ಯಾವುದೇ ರಹದಾರಿ ಪಡೆಯದೇ ಕಂಪೆನಿ ತೆರೆದು ವಿದೇಶದಲ್ಲಿ ಉದ್ಯೋಗ ಕೊಡಿಸುವ ಬಗ್ಗೆ ಇಮಿಗ್ರೇಷನ್ ಅಧಿಕಾರಿಗಳಿಂದ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 2024 ನೇ ಡಿಸೆಂಬರ್ ನಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಈ ಮೇಲಿನ ಎರಡೂ ಪ್ರಕರಣಗಳು ಮಂಗಳೂರು ಪೂರ್ವ ಪೊಲೀಸ್ ಠಾಣೆಯಿಂದ ಮುಂದಿನ ತನಿಖೆಯ ಬಗ್ಗೆ ಸಿಸಿಬಿ ಘಟಕಕ್ಕೆ ವರ್ಗಾಯಿಸಲಾಗಿದೆ.

RELATED ARTICLES
- Advertisment -
Google search engine

Most Popular