Friday, May 23, 2025
Google search engine

Homeರಾಜ್ಯವನ್ಯಜೀವಿಗಳೊಂದಿಗೆ ಸೆಲ್ಫಿಗೆ ತೆರಳಬೇಡಿ: ಅರಣ್ಯ ಸಚಿವರಿಂದ ಕಟ್ಟುನಿಟ್ಟಿನ ಎಚ್ಚರಿಕೆ

ವನ್ಯಜೀವಿಗಳೊಂದಿಗೆ ಸೆಲ್ಫಿಗೆ ತೆರಳಬೇಡಿ: ಅರಣ್ಯ ಸಚಿವರಿಂದ ಕಟ್ಟುನಿಟ್ಟಿನ ಎಚ್ಚರಿಕೆ

ಬೆಂಗಳೂರು: ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಎಚ್ಚರಿಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕು ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಇಂದು ಬೆಳಗ್ಗೆ ಕೆಲವು ಪ್ರವಾಸಿಗರು ಆನೆಯ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಮಾರ್ಗದಲ್ಲಿ ಸಂಚರಿಸುವಾಗ ವಾಹನಗಳಿಂದ ಕೆಳಗೆ ಇಳಿಯುವುದು ಅಪರಾಧವಾಗಿದ್ದು, ಆ ವಾಹನದ ನೋಂದಣಿ ಸಂಖ್ಯೆ ಪತ್ತೆ ಮಾಡಿ ಕಾನೂನು ರೀತ್ಯ ಕ್ರಮ ಜರುಗಿಸಲು ಸೂಚಿಸಿದ್ದಾರೆ.

ರಾಜ್ಯ ಸರ್ಕಾರ, ಅರಣ್ಯ ಇಲಾಖೆ ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಶ್ರಮಿಸುತ್ತಿದೆ. ಸಾರ್ವಜನಿಕರು ಈ ರೀತಿ ಸೆಲ್ಫಿ ತೆಗೆದುಕೊಳ್ಳುವ, ಫೋಟೋ ತೆಗೆಯುವಾಗ ಅನಾಹುತ ಸಂಭವಿಸುವ ಅಪಾಯ ಇರುತ್ತದೆ. ಯಾರೂ ತಮ್ಮ ಅಮೂಲ್ಯ ಜೀವದೊಂದಿಗೆ ಚೆಲ್ಲಾಟ ಆಡಬಾರದು ಎಂದು ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular