ಮಂಗಳೂರು (ದಕ್ಷಿಣ ಕನ್ನಡ) : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆ.75ರ ಬಿ.ಸಿ.ರೋಡ್- ಕೈಕಂಬದ ಸಮೀಪ ಇಂದು ನಡೆದಿದೆ.
ಮೃತರನ್ನು ಜಯರಾಮ್ (50) ಎಂದು ಗುರುತಿಸಲಾಗಿದೆ. ಜಯರಾಮ್ ಅವರು ತುಂಬೆ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಇಂದು ಮುಂಜಾನೆ ಇವರು ಮನೆಯಿಂದ ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.