ಮಂಗಳೂರು (ದಕ್ಷಿಣ ಕನ್ನಡ) ದುಷ್ಕರ್ಮಿಗಳ ತಂಡವೊಂದು ಇಬ್ಬರ ಮೇಲೆ ತಲವಾರು ದಾಳಿ ಮಾಡಿದ ಪರಿಣಾಮ ಓರ್ವ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ಅಡ್ಡೂರು ಕೊಲ್ತಮಜಲು ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಮೃತಪಟ್ಟವರನ್ನು ಇಮ್ತಿಯಾಝ್ ಎಂದು ಗುರುತಿಸಲಾಗಿದೆ. ಕೊಲ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಅಬ್ದುಲ್ ರಹಿಮಾನ್ ಗಾಯಗೊಂಡ ಯುವಕ ಎಂದು ತಿಳಿದು ಬಂದಿದೆ.
ಇಬ್ಬರೂ ಕೊಲ್ತಮಜಲು ಎಂಬಲ್ಲಿ ಪಿಕ್ ಅಪ್ ವಾಹನದಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ತಲವಾರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.
