Monday, June 9, 2025
Google search engine

Homeರಾಜ್ಯಸುದ್ದಿಜಾಲರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ತನಿಖೆಗೆ

ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ತನಿಖೆಗೆ

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರದ ಬಜ್ಪೆ ಬಳಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಬಿಜೆಪಿ ನಾಯಕರು ಸೇರಿದಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದರು. ಈ ಬೆನ್ನಲ್ಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಜ್ಯ ಗೃಹಸಚಿವಾಲಯ ರಾಷ್ಟ್ರೀಯ ತನಿಖಾ ದಳ (NIA) ಕ್ಕೆ ವಹಿಸಿ ಆದೇಶ ಹೊರಡಿಸಿದೆ. ಎನ್​ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಲಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾ‌ನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು.

ಮೇ 1 ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಸುಹಾಸ್​ ಶೆಟ್ಟಿಯನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

RELATED ARTICLES
- Advertisment -
Google search engine

Most Popular