Monday, June 9, 2025
Google search engine

Homeಅಪರಾಧಮಹಾರಾಷ್ಟ್ರ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರ ದುರ್ಮರಣ

ಮಹಾರಾಷ್ಟ್ರ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರ ದುರ್ಮರಣ

ಮುಂಬೈ: ಚಲಿಸುತ್ತಿದ್ದ ರೈಲಿನಿಂದ ಬಿದ್ದ ಐವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಹರಾಷ್ಟ್ರದ ಥಾಣೆಯ ಮುಂಬ್ರಾ ರೈಲು ನಿಲ್ದಾಣದಲ್ಲಿ ನಡೆದಿದೆ.

ದೀವಾ-ಕೋಪರ್ ಪುಷ್ಪಕ್ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಚಲಿಸುತ್ತಿದ್ದ ರೈಲಿನಿಂದ 10ಕ್ಕೂ ಅಧಿಕ ಪ್ರಯಾಣಿಕರು ಕೆಳಗೆ ಬಿದ್ದಿದ್ದು, ಐದಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಮುಂಬೈ ಸಿಎಸ್ ಟಿನಿಲ್ದಾಣದಿಂದ ಲಖನೌಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ರೈಲಿನಿಂದ 10-12 ಪ್ರಯಾಣಿಕರು ಬಿದ್ದಿದ್ದಾರೆ. ಹಲವರು ಗಂಭಿರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ರೈಲಿನಲ್ಲಿ ಅತಿಯಾದ ಜನಸಂದಣಿ ಉಂಟಾಗಿದ್ದು, ಈ ವೇಳೆ ಹಲವು ಪ್ರಯಾಣಿಕರು ಬಾಗಿಲುಗಳಲ್ಲಿ ನೇತಾಡುತ್ತಾ ಪ್ರಯಾಣಿಸುತ್ತಿದ್ದರು. ಈ ಸಮಯದಲ್ಲಿ ಆಯತಪ್ಪಿ ಬಿದ್ದು ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಘಟನೆಯಲ್ಲಿ ಹಲವರು ಗಾಯಗೊಂಡಿದ್ದ, ಗಾಯಾಳುಗಳನ್ನು ಥಾಣೆ ಸಿವಿಲ್ ಆಸ್ಪತ್ರೆ ಮತ್ತು ಕಲ್ಯಾಣ್‌ ನಲ್ಲಿರುವ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು.

RELATED ARTICLES
- Advertisment -
Google search engine

Most Popular