ಹೊಸಕೋಟೆ: ಬೆಂಗಳೂರಿಗೆ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ತಿರುಪತಿಯಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ 55 ವರ್ಷದ ಪುರುಷ, 18 ವರ್ಷದ ಯುವತಿ ಮತ್ತು 5 ವರ್ಷದ ಮಗು ಸಾವಿಗೀಡಾಗಿದ್ದಾರೆ. 16 ಜನರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
AP 03 Z 0190 ಸಂಖ್ಯೆಯ ಬಸ್ ನಿದ್ದೆ ಮಂಪರಿನಲ್ಲಿ ಓವರ್‌ಟೇಕ್ ಮಾಡಲು ಹೋಗಿ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಬಸ್ಸಿನ ಮುಂಭಾಗ ಹಾಗೂ ಬದಿಯ ಭಾಗ ಸಂಪೂರ್ಣ ಜಖಂಗೊಂಡಿದ್ದು, ಗಾಯಾಳುಗಳನ್ನು ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.