Sunday, June 15, 2025
Google search engine

Homeಅಪರಾಧಕಾನೂನುಯೋಗೀಶ್ ಗೌಡ ಹತ್ಯೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

ಯೋಗೀಶ್ ಗೌಡ ಹತ್ಯೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

ಬೆಂಗಳೂರು: ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಈ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ಇಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಬಿಜೆಪಿ ಮುಖಂಡ ಯೋಗೀಶ್‌ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಶಾಸಕ ವಿನಯ್‌ ಕುಲಕರ್ಣಿ ಅವರಿಗೆ ಮಂಜೂರು ಮಾಡಲಾಗಿದ್ದ ಜಾಮೀನನ್ನು ಇತ್ತೀಚಿಗೆ ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು. ಅಲ್ಲದೆ, ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಕುಲಕರ್ಣಿಗೆ ಆದೇಶ ನೀಡಿತ್ತು.

ಈ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಕ್ಕೆ ವಿನಯ್​​ ಕುಲಕರ್ಣಿ ಹಾಜರಾಗಿದ್ದು, ನ್ಯಾಯಾಲಯ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

RELATED ARTICLES
- Advertisment -
Google search engine

Most Popular