ಬೆಂಗಳೂರು: ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ದುರ್ಘಟನೆಯಲ್ಲಿ ಸಾವಿಗೀಡಾಗಿದ್ದಾರೆ ಅವರ ನಿಧನಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ಅಹಮದಾಬಾದ್ನಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಬಲಿಯಾದವರಲ್ಲಿ ಒಬ್ಬರಾದ ವಿಜಯ್ ರೂಪಾನಿ ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು ಮತ್ತು ಈ ಹಿಂದೆ ರಾಜ್ಯಸಭಾ ಸಂಸದರಾಗಿ ಗಮನಾರ್ಹ ಕೊಡುಗೆಗಳನ್ನು ನೀಡಿದ್ದರು. ನಾನು ಕೆಲವು ಸಂದರ್ಭಗಳಲ್ಲಿ ಅವರ ಜೊತೆ ಮಾತನಾಡಿದ್ದೇನೆ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.