Tuesday, June 17, 2025
Google search engine

Homeಅಪರಾಧಖಾಸಗಿ ಬಸ್-ಹಿಟಾಚಿ ಢಿಕ್ಕಿ: ಓರ್ವ ಮೃತ, ಹಲವರಿಗೆ ಗಾಯ

ಖಾಸಗಿ ಬಸ್-ಹಿಟಾಚಿ ಢಿಕ್ಕಿ: ಓರ್ವ ಮೃತ, ಹಲವರಿಗೆ ಗಾಯ

ಮಂಗಳೂರು (ದಕ್ಷಿಣ ಕನ್ನಡ): ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ತಡರಾತ್ರಿ ನಡೆದಿದೆ.

ಮೃತ ವ್ಯಕ್ತಿಯನ್ನು ಶಂಕರ ನಾರಾಯಣ ಭಟ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಲಾವತ್ತಡ್ಕ ಎಂಬಲ್ಲಿ ಹೆದ್ದಾರಿ ಬದಿ ಲಾರಿಯಲ್ಲಿ ನಿಲ್ಲಿಸಲಾಗಿದ್ದ ಹಿಟಾಚಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಂಭೀರ ಗಾಯಗೊಂಡ ಶಂಕರ ನಾರಾಯಣ ಭಟ್ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular