Tuesday, June 17, 2025
Google search engine

Homeಅಪರಾಧಪುತ್ತೂರಿನಲ್ಲಿ ಗರ್ಭಿಣಿ ಮಹಿಳೆಯ ಆತ್ಮಹತ್ಯೆ

ಪುತ್ತೂರಿನಲ್ಲಿ ಗರ್ಭಿಣಿ ಮಹಿಳೆಯ ಆತ್ಮಹತ್ಯೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಚಿಕ್ಕಪುತ್ತೂರು ಎಂಬಲ್ಲಿ ಏಳು ತಿಂಗಳ ಗರ್ಭಿಣಿ ರೇಷ್ಮಾ (28) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸುರತ್ಕಲ್ ಮೂಲದ ರೇಷ್ಮಾರನ್ನು ನಾಲ್ಕು ವರ್ಷಗಳ ಹಿಂದೆ ಚಿಂತನ್ ಎಂಬುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿ ಇದ್ದಾಳೆ ಹಾಗೂ ಅವರು ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular