Thursday, June 19, 2025
Google search engine

Homeಅಪರಾಧ₹38 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ : ಓರ್ವ ಬಂಧನ

₹38 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ : ಓರ್ವ ಬಂಧನ

ಬೀದರ್: ಜಿಲ್ಲಾ ಪೊಲೀಸರ ಯಶಸ್ವಿ ಕಾರ್ಯಾಚರಣೆಯ ಫಲವಾಗಿ, ಬೀದರ್‌ನ ಗಾಂಧಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಮಾದಕ ವಸ್ತುಗಳು ಜಪ್ತಿ ಆಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಸಂಗ್ರಹಿತ ಮಾದಕ ವಸ್ತುಗಳ ಮೌಲ್ಯ ಸುಮಾರು ₹38 ಲಕ್ಷಕ್ಕಿಂತ ಹೆಚ್ಚು ಎಂದು ಅಂದಾಜಿಸಲಾಗಿದೆ.

ಬೀದರ್ ಜಿಲ್ಲೆ ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗಮೇಶ್ವರ್ ಕಾಲೋನಿಯಲ್ಲಿ ಮಾದಕ ವಸ್ತು ಸಂಗ್ರಹಿಸಿರುವ ಬಗ್ಗೆ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ಗಾಂಧಿಗಂಜ್ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ದಾಳಿ ನಡೆಸಿದರು. ಈ ದಾಳಿಯಲ್ಲಿ ಸ್ಥಳೀಯ ತಹಶೀಲ್ದಾರ್ ಸಮ್ಮುಖದಲ್ಲಿ ಬಾಗಿಲು ತೆರೆಯಿಸಿ ಪರಿಶೀಲನೆ ನಡೆಸಲಾಯಿತು. ಪರಿಶೀಲನೆಯ ವೇಳೆ ಮನೆ ಒಳಗೆ ಅಕ್ರಮವಾಗಿ ಪ್ಯಾಕೆಟ್‌ಗಳಾಗಿ ಇಡಲಾದ ಮಾದಕ ವಸ್ತು ಪತ್ತೆಯಾಗಿದ್ದು, ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಮಾದಕ ವಸ್ತುಗಳನ್ನು ಸಂಗ್ರಹಿಸಿದ್ದ ವ್ಯಕ್ತಿಯನ್ನು ಪೊಲೀಸರು ಸ್ಥಳದಲ್ಲೇ ಬಂಧಿಸಿದ್ದಾರೆ. ಎಸ್ಪಿ ಪ್ರದೀಪ್ ಗುಂಟಿ ಮಾರ್ಗದರ್ಶನದಲ್ಲಿ ಗಾಂಧಿಗಂಜ್ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಈ ಕುರಿತು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular