Monday, June 23, 2025
Google search engine

Homeರಾಜ್ಯಸುದ್ದಿಜಾಲಧರ್ಮಸ್ಥಳ ಅಪರಾಧಕ್ಕೆ ಸಂಬಂಧಿಸಿದ ಪತ್ರ ವೈರಲ್ – ಶೀಘ್ರದಲ್ಲಿ ಮಾಹಿತಿ ನೀಡಲು ವ್ಯಕ್ತಿ ಸಿದ್ಧ, ಪೊಲೀಸ್...

ಧರ್ಮಸ್ಥಳ ಅಪರಾಧಕ್ಕೆ ಸಂಬಂಧಿಸಿದ ಪತ್ರ ವೈರಲ್ – ಶೀಘ್ರದಲ್ಲಿ ಮಾಹಿತಿ ನೀಡಲು ವ್ಯಕ್ತಿ ಸಿದ್ಧ, ಪೊಲೀಸ್ ತನಿಖೆಗೆ ಚಾಲನೆ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪತ್ರದ ನೈಜತೆಯನ್ನು ಪರಿಶೀಲಿಸುವ ಸಲುವಾಗಿ ಈ ಪತ್ರದಲ್ಲಿ ನಮೂದಿಸಲಾಗಿದ್ದ ಬೆಂಗಳೂರಿನ ವಕೀಲರನ್ನು ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಸಂಪರ್ಕಿಸಲಾಗಿದೆ‌. ಆಗ ಈ ವಕೀಲರು ವ್ಯಕ್ತಿಯೋರ್ವ ತನ್ನ ಬಳಿ ಬಂದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತನಗೆ ಮಾಹಿತಿ ಇರುವುದಾಗಿ ಹಾಗೂ ತಾನು ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿಯನ್ನು ನೀಡಲು ಸಿದ್ದವಿರುವುದಾಗಿ ತಿಳಿಸಿದ್ದಾರೆ.

ಈ ವ್ಯಕ್ತಿಗೆ ಅಗತ್ಯವಾದ ಕಾನೂನು ಸುರಕ್ಷತೆಯನ್ನು ಕಲ್ಪಿಸಿ, ಆ ಬಳಿಕ ಆತನನ್ನು ಹಾಜರುಪಡಿಸುವುದಾಗಿ ವಕೀಲರು ತಿಳಿಸಿರುತ್ತಾರೆ. ಅದರಂತೆ ಸದ್ರಿ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪ್ರಕಟಣೆಯಲ್ಲಿ ಇಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular