ಕಲಬುರಗಿ: ಕಲಬುರಗಿಯ ಹೊರವಲಯದಲ್ಲಿರುವ ಪಟ್ನಾ ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದೆ. ಡಾಬಾಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮೂವರು ವ್ಯಕ್ತಿಗಳನ್ನು ಬರ್ಬರವಾಗಿ ಕೊಚ್ಚಿ ಹತ್ಯೆಗೈದ ದಾರುಣ ಘಟನೆ ನಡೆದಿದೆ.
ಹತ್ಯೆಗೀಡಾದವರನ್ನು ಸಿದ್ದಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಎಂದು ಗುರುತಿಸಲಾಗಿದೆ. ಮೂರು ಜನ ಸಂಬಂಧಿಕರಾಗಿದ್ದು, ಡಾಬಾ ನಡೆಸುತ್ತಿದ್ದರು. ಡಾಬಾದಲ್ಲಿ ಕೆಲಸ ಮಾಡುತ್ತಿದ್ದಾಗ ದುಷ್ಕರ್ಮಿಗಳು ಮೂವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಹಳೆಯ ವೈಷಮ್ಯದಿಂದ ಕೊಲೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.