Saturday, June 28, 2025
Google search engine

Homeಸಿನಿಮಾನಟಿ ಶೆಫಾಲಿ ಜರಿವಾಲ ಹೃದಯಘಾತದಿಂದ ನಿಧನ

ನಟಿ ಶೆಫಾಲಿ ಜರಿವಾಲ ಹೃದಯಘಾತದಿಂದ ನಿಧನ

ಹಿಂದಿ ಬಿಗ್ ಬಾಸ್ 13ರ ಸ್ಪರ್ಧಿಯಾಗಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ.

42 ವರ್ಷದ ಶೆಫಾಲಿ ಮುಂಬೈನ ಅಂಧೇರಿ ಲೋಖಂಡ್‌ವಾಲಾದಲ್ಲಿ ವಾಸಿಸುತ್ತಿದ್ದರು. ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಶೆಫಾಲಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಷ್ಟು ಹೊತ್ತಿಗಾಗಲೇ ಶೆಫಾಲಿ ಕೊನೆಯುಸಿರೆಳೆದಿದ್ದರು.

ಪುನೀತ್ ರಾಜ್‌ಕುಮಾರ್ ಜೊತೆ ಹುಡುಗರು ಚಿತ್ರದಲ್ಲಿ ‘ನಾ ಬೋರ್ಡು ಇರದ ಬಸ್ಸನು’ ಹಾಡಿಗೆ ಶೆಫಾಲಿ ಮಸ್ತ್ ಆಗಿ ಕುಣಿದಿದ್ದರು. ಸದ್ಯ ಶೆಫಾಲಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ.

1982ರ ಡಿಸೆಂಬರ್ 15ರಂದು ಜನಿಸಿದ ಶೆಫಾಲಿ ಮುಂಬೈನಲ್ಲಿ ಬೆಳೆದರು. 2004ರಲ್ಲಿ ಹರ್ಮೀತ್ ಸಿಂಗ್ ಜೊತೆ ಶೆಫಾಲಿ ವಿವಾಹವಾದರು. ಆ ಬಳಿಕ ಪತಿಯೊಂದಿಗೆ ವಿಚ್ಛೇದನ ಪಡೆದು 2014ರಲ್ಲಿ ಪರಾಗ್ ತ್ಯಾಗಿ ಅವರನ್ನು ಶೆಫಾಲಿ ಮದುವೆಯಾಗಿ ಸಂಸಾರ ನಡೆಸುತ್ತಿದ್ದರು. ಕಾಂತಾ ಲಗಾ ಹಾಡಿನ ಮೂಲಕ ನಟಿ ಫೇಮಸ್‌ ಆಗಿದ್ದರು.

RELATED ARTICLES
- Advertisment -
Google search engine

Most Popular