ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಸಾಲಬಾಧೆ ತಾಳಲಾರದೇ ವಿಷದ ಕಾಳಿನ ಮಾತ್ರೆ ಸೇವಿಸಿ ರೈತನೋರ್ವ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಲಿಗ್ರಾಮ ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಘಟನೆನಡೆದಿದೆ.
ಜಮೀನನ ಬಳಿ ಕಾಳಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಗೋವಿಂದೇಗೌಡ(೪೫) ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಅಸ್ವತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಬೆಳಗಿನ ಜಾವ ನಿಧನರಾಗಿದ್ದು ಮೃತರು ಬಳ್ಳೂರು ಸಹಕಾರ ಸಂಘ ಮತ್ತು ಖಾಸಗಿ ಹಣಕಾಸು ಸಂಸ್ಥೆಗಳು ಸೇರಿದಂತೆ ಕೈ ಸಾಲವಾಗಿ 15 ಲಕ್ಷಕ್ಕು ಅಧಿಕ ಸಾಲ ಮಾಡಿದ್ದರು. ರೈತ ಬೆಳೆ ನಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತನ ಕುಟುಂಬದ ಮೂಲಗಳು ತಿಳಿಸಿವೆ.
ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ ಘಟನೆಯ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.