Monday, June 30, 2025
Google search engine

Homeಅಪರಾಧಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಭದ್ರತೆ ಹೆಚ್ಚಳ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಭದ್ರತೆ ಹೆಚ್ಚಳ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಭಾನುವಾರ ಸಂಜೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಕೆಲ ಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು. ನಿಲ್ದಾಣದ ನಿರ್ದೇಶಕರಿಗೆ ಈ ಸಂದೇಶ ಬಂದಿದ್ದು, ತಕ್ಷಣ ಭದ್ರತಾ ಕ್ರಮ ಕೈಗೊಳ್ಳಲಾಯಿತು.

ಪ್ರಯಾಣಿಕರ ತಪಾಸಣೆ ಹೆಚ್ಚಿಸಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸ್ ಹಾಗೂ ಗುಪ್ತಚರ ಸಿಬ್ಬಂದಿ ನಿಗಾ ವಹಿಸಿದ್ದಾರೆ. ಇತ್ತೀಚೆಗೆ ಕರ್ನಾಟಕದಲ್ಲಿ ಇಂತಹ ಬೆದರಿಕೆ ಪ್ರಕರಣಗಳು ಹೆಚ್ಚಾಗಿದ್ದು, ಬೆಂಗಳೂರು, ಹಾಸನ, ಉಡುಪಿಯಲ್ಲಿ ಶಾಲೆಗಳು ಮತ್ತು ವಿಮಾನ ನಿಲ್ದಾಣಗಳಿಗೂ ಇಂಥ ಸಂದೇಶಗಳು ಬಂದಿದ್ದವು.

RELATED ARTICLES
- Advertisment -
Google search engine

Most Popular