ಮಂಗಳೂರು (ದಕ್ಷಿಣ ಕನ್ನಡ): ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಪಕ್ಷದಿಂದ ಪ್ರತಿಭಟನಾ ಸಭೆಯು ಮಂಗಳೂರಿನ ಕ್ಲಾಕ್ ಟವರ್ ಬಳಿ ನಡೆಯಿತು.
ಇದೇ ವೇಳೆ ಮಾತನಾಡಿದ ಜೆಡಿಎಸ್ ರಾಜ್ಯ ವಕ್ತಾರ ಎಂಬಿ ಸದಾಶಿವ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ರು. ಸರಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ನಮ್ಮ ನಾಡಿನ ಜಲ, ನೆಲ, ಸಂಸ್ಕೃತಿ ಭಾಷೆ ಇವುಗಳನ್ನು ರಕ್ಷಿಸಬೇಕಾದ ಇಚ್ಛಾ ಶಕ್ತಿ ನಮ್ಮಲ್ಲಿರಬೇಕು. ಮುಂದಿನ ದಿನಗಳಲ್ಲಿ ರಾಜ್ಯ ಸರಕಾರದ ವಿರುದ್ಧ ದೊಡ್ಡ ಮಟ್ಟದ ಹೋರಾಟವನ್ನು ರಾಜ್ಯದ ಗ್ರಾಮ ಗ್ರಾಮಗಳಲ್ಲಿ ಘಟಿಸಲಾಗುವುದೆಂದು ಸರಕಾರಕ್ಕೆ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.



