Tuesday, July 1, 2025
Google search engine

Homeರಾಜಕೀಯಸರ್ಕಾರ ಬಂಡೆಯಂತೆ ಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ಸರ್ಕಾರ ಬಂಡೆಯಂತೆ ಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯ ರಾಜಕಾರಣದಲ್ಲಿ “ಸೆಪ್ಟೆಂಬರ್‌ನಲ್ಲಿ ಕ್ರಾಂತಿ ನಡೆಯಲಿದೆ” ಎಂಬ ಭಾರೀ ರಾಜಕೀಯ ಊಹಾಪೋಹಗಳು ಹಬ್ಬುತ್ತಿದ್ದ ಕ್ಷಣದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸಂದೇಶವೊಂದನ್ನು ನೀಡಿದ್ದು, ತಮ್ಮ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ಭಿನ್ನಮತವಿಲ್ಲ ಎಂದು ತಿಳಿಸಿದರು. “ನಾವು ಇಬ್ಬರೂ ಒಟ್ಟಾಗಿಯೇ ಇದ್ದೇವೆ. ನಮ್ಮ ಸರ್ಕಾರ ಬಂಡೆಯಂತಿದ್ದು, ಪೂರ್ಣ 5 ವರ್ಷಗಳನ್ನು ಪೂರೈಸಲಿದೆ” ಎಂದು ಅವರು ವಿಶ್ವಾಸದ ಜತೆ ಮಾತನಾಡಿದರು.

ಮಾಧ್ಯಮಗಳ ಜೊತೆ ಡಿಕೆಶಿ ಕೈ ಹಿಡಿದು ಮಾತನಾಡಿದ ಅವರು, ನಮ್ಮಿಬ್ಬರ ಮಧ್ಯೆ ತಂದಿಡುವ ಪ್ರಯತ್ನವನ್ನು ಮಾಡಿದರೂ ಅದು ಆಗುವುದಿಲ್ಲ. ನಮ್ಮ ಬಗ್ಗೆ ಮಾತನಾಡುವ ಶ್ರೀರಾಮಲು ಎಷ್ಟು ಚುನಾವಣೆ ಸೋತಿದ್ದಾನೆ ಹೇಳಿ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು ಎಂದರು.

ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಮಾಧ್ಯಮದವರಿಗೆ ಅನಿಸಿದೆ ಅಲ್ವಾ. ಅದೇ ಸತ್ಯ ಎಂದು ಹೇಳುವ ಮೂಲಕ ಈ ಬಾರಿ ಸಿದ್ದರಾಮಯ್ಯ ದಸರಾ ಉದ್ಘಾಟನೆ ಮಾಡುವುದಿಲ್ಲ ಎಂದಿದ್ದ ಅಶೋಕ್‌ಗೆ ತಿರುಗೇಟು ನೀಡಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ, ಕಾಂಗ್ರೆಸ್ ಶಾಸಕರ ಕಷ್ಟ ಸುಖ ಕೇಳುತ್ತಾರೆ. ಪಕ್ಷ ಸಂಘಟನೆ ಬಗ್ಗೆ ಸಲಹೆ ಕೊಡುತ್ತಾರೆ. ಅವರ ಕೆಲಸವನ್ನು ಮಾಡುತ್ತಾರೆ ಎಂದರು.

RELATED ARTICLES
- Advertisment -
Google search engine

Most Popular