Wednesday, July 2, 2025
Google search engine

Homeರಾಜ್ಯRCB ವಿಜಯೋತ್ಸವದ ನಂತರ ಜನಸಂದಣಿ ನಿಯಂತ್ರಣಕ್ಕೆ ಸರ್ಕಾರದ ಹೊಸ ಮಾರ್ಗಸೂಚಿ

RCB ವಿಜಯೋತ್ಸವದ ನಂತರ ಜನಸಂದಣಿ ನಿಯಂತ್ರಣಕ್ಕೆ ಸರ್ಕಾರದ ಹೊಸ ಮಾರ್ಗಸೂಚಿ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತ ಮರುಕಳಿಸಬಾರದು ಎಂಬ ಕಾರಣದಿಂದಾಗಿ, ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಮಂಗಳವಾರ, ಕರ್ನಾಟಕ ಪೊಲೀಸ್ ಇಲಾಖೆ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಈ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಹಬ್ಬಗಳು, ಮೆರವಣಿಗೆಗಳು, ಪ್ರತಿಭಟನೆಗಳು, ಕ್ರೀಡಾ ಕೂಟಗಳು ಸೇರಿದಂತೆ ಹೆಚ್ಚು ಜನ ಸೇರುವ ಎಲ್ಲ ಕಾರ್ಯಕ್ರಮಗಳಿಗೆ ಈ ಮಾರ್ಗಸೂಚಿ ಅನ್ವಯವಾಗುತ್ತದೆ.

ಸಾರ್ವಜನಿಕ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶವಿರುವ ಈ ನಿಯಮಗಳು ತಕ್ಷಣದಿಂದ ಜಾರಿಗೆ ಬರುವಂತಿವೆ.

RELATED ARTICLES
- Advertisment -
Google search engine

Most Popular