ಮಂಗಳೂರು (ದಕ್ಷಿಣ ಕನ್ನಡ): ಬಿಜೆಪಿ ಮುಖಂಡನ ಪುತ್ರನ ಅತ್ಯಾಚಾರ, ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಸಂತ್ರಸ್ತೆಯ ತಾಯಿ ಕಣ್ಣೀರು ಹಾಕಿದ್ದಾರೆ. ಬಿಜೆಪಿ ಮುಖಂಡನ ಪುತ್ರನೊಬ್ಬ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದ. ಇದೀಗ ಸಂತ್ರಸ್ತ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾಳೆ. ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಆರೋಪಿ ಕೃಷ್ಣ.ಜೆ.ರಾವ್ ನಾಪತ್ತೆಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ನ್ಯಾಯಕ್ಕಾಗಿ ನಡೆದ ಎಸ್ ಡಿಪಿಐ ಪಕ್ಷದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂತ್ರಸ್ತೆ ತಾಯಿ ನಮಿತಾ ಭಾಗವಹಿಸಿದ್ದರು.

ಇದೇ ವೇಳೆ ಮಾತನಾಡಿದ ಅವ್ರು, ನಾನು ಎಲ್ಲಾ ಹಿಂದೂ ಮುಖಂಡರಲ್ಲಿ ಮಾತನಾಡಿದ್ದೇನೆ. ಎಲ್ಲರು ಮಗುವನ್ನು ತೆಗೆಸಿ ಎಂದು ಹೇಳಿದ್ದಾರೆ ಹೊರತು ಮದುವೆ ಮಾಡಿ ಕೊಡಬೇಕೆಂದು ಯಾರು ಹೇಳಿಲ್ಲ.
ಇವತ್ತು ಹುಡುಗನನ್ನು ಅವನ ಅಪ್ಪನೆ ಅಡಗಿಸಿಟ್ಟಿದ್ದಾರೆ. ನನ್ನ ಮಗಳ ಮಗುವಿಗೆ ತಂದೆಯ ಸ್ಥಾನ ಕೊಡಿಸಿ. ಹುಡುಗ ನೊಂದಿಗೆ ರಿಜಿಸ್ಟರ್ ಮ್ಯಾರೇಜ್ ಆಗಬೇಕು ಎಂದು ಸಂತ್ರಸ್ತೆಯ ತಾಯಿ ನಮಿತಾ ಆಗ್ರಹಿಸಿದ್ದಾರೆ.