Thursday, July 3, 2025
Google search engine

Homeಅಪರಾಧಕಾನೂನುಸಕ್ರಿಯವಿಲ್ಲದ ಎಂಟು ರಾಜಕೀಯ ಪಕ್ಷಗಳಿಗೆ ಶೋಕಾಸ್: ಜುಲೈ 18ಕ್ಕೆ ಚುನಾವಣಾ ಆಯೋಗದ ವಿಚಾರಣೆ

ಸಕ್ರಿಯವಿಲ್ಲದ ಎಂಟು ರಾಜಕೀಯ ಪಕ್ಷಗಳಿಗೆ ಶೋಕಾಸ್: ಜುಲೈ 18ಕ್ಕೆ ಚುನಾವಣಾ ಆಯೋಗದ ವಿಚಾರಣೆ

ಬೆಂಗಳೂರು: ರಾಜ್ಯದಲ್ಲಿ ಸಕ್ರಿಯವಾಗಿರದ ಎಂಟು ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ತೆಗೆದುಹಾಕಲು ಭಾರತ ಚುನಾವಣಾ ಆಯೋಗ ನಿರ್ಧರಿಸಿದೆ. ಈ ಸಂಬಂಧ ಜುಲೈ 18 ರಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ ಎಂದು ಬೆಂಗಳೂರು ನಗರ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಉಪ ಆಯುಕ್ತ ಜಗದೀಶ್ ಜಿ ತಿಳಿಸಿದ್ದಾರೆ.

ರಾಜಕಾರಣದಲ್ಲಿ ಸಕ್ರಿಯವಾಗಿರದ ನಮ್ಮ ಕಾಂಗ್ರೆಸ್, ಪ್ರಜಾ ರೈತ ರಾಜ್ಯ ಪಕ್ಷ, ಕಲ್ಯಾಣ ಕ್ರಾಂತಿ ಪಕ್ಷ, ಭಾರತೀಯ ಡಾ. ಬಿ.ಆರ್. ಅಂಬೇಡ್ಕರ್ ಜನತಾ ಪಕ್ಷ, ರಕ್ಷಕ ಸೇನೆ, ಮಹಿಳಾ ಪ್ರಧಾನ ಪಕ್ಷ, ಅಂಬೇಡ್ಕರ್ ಜನತಾ ಪಕ್ಷ ಮತ್ತು ಕರ್ನಾಟಕ ಪ್ರಜಾ ವಿಕಾಸ ಪಕ್ಷಗಳಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಲಾಗಿದೆ.

ಈ ಪಕ್ಷಗಳು, ಕಳೆದ ಆರು ವರ್ಷಗಳಿಂದ ಯಾವುದೇ ಲೋಕಸಭೆ, ವಿಧಾನಸಭೆ ಅಥವಾ ಉಪಚುನಾವಣೆಗಳಲ್ಲಿ ಸ್ಪರ್ಧಿಸಿಲ್ಲ ಹಾಗೂ ವಿಳಾಸಗಳನ್ನು ಪತ್ತೆಹಚ್ಚಲೂ ಸಾಧ್ಯವಾಗದ ಕಾರಣ ಅವುಗಳನ್ನು ಕೈಬಿಡಲು ನಿರ್ಧರಿಸಲಾಗಿದೆ.

ಆದರೂ ಈ ರಾಜಕೀಯ ಪಕ್ಷಗಳಿಗೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ಒಂದು ಅವಕಾಶವನ್ನು ನೀಡಲಾಗಿದೆ. ಪಕ್ಷದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಜುಲೈ 18, 2025 ರಂದು ವಿಚಾರಣೆಗೆ ಹಾಜರಾಗಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಒಂದು ವೇಳೆ ಈ ಪಕ್ಷಗಳು ನಿಗದಿತ ಅವಧಿಯೊಳಗೆ ದಾಖಲೆಗಳನ್ನು ಸಲ್ಲಿಸದಿದ್ದರೆ ಪಕ್ಷದಿಂದ ಯಾವುದೇ ಹೇಳಿಕೆ ಬಂದಿಲ್ಲ ಎಂದು ಪರಿಗಣಿಸಿ ನೋಂದಣಿಯನ್ನು ರದ್ದುಗೊಳಿಸಲಾಗುತ್ತದೆ.

RELATED ARTICLES
- Advertisment -
Google search engine

Most Popular