ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗೆ ಬಿಎಂಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹರಪನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.
ಹರಪನಹಳ್ಳಿ ಬಳಿ ವಿದ್ಯಾರ್ಥಿಗೆ ಬಿಎಂಟಿಸಿ ಬಸ್ ಗುದ್ದಿಕೊಂಡು ಹೋಗಿದೆ. ವಕೀಲ ಬಡಾವಣೆ ನಿವಾಸಿ ಸಂಜಯ್ (17) ಎನ್ನುವ ವಿದ್ಯಾರ್ಥಿಗೆ ಗಂಭೀರವಾದ ಗಾಯಗಳಾಗಿವೆ. ಶಾಲಾ ಬಸ್ ಹೊರಟಿತು ಎಂದು ವಿದ್ಯಾರ್ಥಿ ಹಿಂದೆ ಓಡುತ್ತಿದ್ದ ವಿದ್ಯಾರ್ಥಿಗಳು ಇದ್ದರೂ ಗಮನಿಸದೇ ಶಾಲಾ ಬಸ್ ಚಾಲಕ ತೆರಳಿದ್ದಾನೆ. ಶಾಲಾ ಬಸ್ ಹಿಂದೆ ಓಡುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.