Monday, July 7, 2025
Google search engine

Homeರಾಜ್ಯಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ರಾಷ್ಟ್ರಮಟ್ಟದ ಜವಾಬ್ದಾರಿ: ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸ್ಥಾಪನೆಗೆ...

ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ರಾಷ್ಟ್ರಮಟ್ಟದ ಜವಾಬ್ದಾರಿ: ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸ್ಥಾಪನೆಗೆ ಸಿದ್ಧತೆ

ಬೆಂಗಳೂರು : ಕಾಂಗ್ರೆಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಷ್ಟ್ರಮಟ್ಟದ ಹುದ್ದೆ ನೀಡಲು ಹೈಕಮಾಂಡ್ ಸಿದ್ಧತೆ ನಡೆಸಿದ್ದು, ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಅಸ್ತಿತ್ವಕ್ಕೆ ತರಲು ನಿರ್ಧರಿಸಿದೆ ಎನ್ನಲಾಗಿದೆ.

ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಿದ್ದು, ರಾಷ್ಟ್ರೀಯ ಸಲಹಾ ಮಂಡಳಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನು ಮಾಡಲು ನಿರ್ಧರಿಸಲಾಗಿದೆ.

ಜುಲೈ 15 ರಂದು ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಮೊದಲ ಸಭೆ ನಡೆಯಲಿದೆ. ಈ ಮಂಡಳಿಯಲ್ಲಿ ನಾಲ್ವರು ಮಾಜಿ ಮುಖ್ಯಮಂತ್ರಿಗಳೂ ಇರಲಿದ್ದಾರೆ. ಬಿ.ಕೆ. ಹರಿಪ್ರಸಾದ್, ವೀರಪ್ಪ ಮೊಯ್ಲಿ ಸೇರಿದಂತೆ 24 ಮಂದಿ ಸದಸ್ಯರಿದ್ದಾರೆ. ಕರ್ನಾಟಕದಿಂದಲೇ ಹಿಂದುಳಿದ ವರ್ಗಗಳ ಮಂಡಳಿ ಸಭೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅಧ್ಯಕ್ಷ ಸ್ಥಾನ ನೀಡಲಾಗಿದೆ.

RELATED ARTICLES
- Advertisment -
Google search engine

Most Popular