ನವದೆಹಲಿ: ಮೈಸೂರು ದಸರಾದಲ್ಲಿ ಏರ್ ಶೋಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದೇವೆ. ಇದಕ್ಕೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ಮಾಡಿ ಎಂದು ಮನವಿ ಮಾಡಲಾಗಿದೆ. ಉತ್ತರ ಪ್ರದೇಶ ತಮಿಳುನಾಡಿನಲ್ಲಿ ಡಿಫೆನ್ಸ್ ಕಾರಿಡಾರ್ ಇದೆ. ಅದೇ ರೀತಿ ಕರ್ನಾಟಕದಲ್ಲೂ ಡಿಫೆನ್ಸ್ ಕಾರಿಡಾರ್ ಮಾಡುವಂತೆ ಮನವಿ ಮಾಡಲಾಗಿದೆ. ವಿವಿಧ ಯೋಜನೆಗಳಿಗಾಗಿ ರಕ್ಷಣೆ ಇಲಾಖೆ ಭೂಮಿಗೆ ಮನವಿ ಸಲ್ಲಿಸಿದ್ದೇವೆ . ಏರ್ ಪೋರ್ಟ್ ರಸ್ತೆಯಲ್ಲಿ ಡಬಲ್ ಡೆಕರ್ ರಸ್ತೆಗೆ ಭೂಮಿ ರಕ್ಷಣ ಇಲಾಖೆಗೆ ಸೇರಿದ ಭೂಮಿ ನೀಡುವಂತೆ ಮನವಿ ಸಲ್ಲಿಸಲಾಗಿದೆ.
ರಾಜನಾಥ್ ಸಿಂಗ್ ಮನವಿಗೆ ಸಕಾರಾತ್ಮಕ ಸ್ಪಂದನೆ ನೀಡಿರುವುದು ಖುಷಿ ತಂದಿದೆ ಎಂದರು. ನಾಳೆ ಪ್ರಧಾನಿ ನರೇಂದ್ರ ಮೋದಿಯವರನ್ನೂ ಹಾಗೂ ರಾಹುಲ್ ಗಾಂಧಿಯವರನ್ನೂ ಭೇಟಿ ಮಾಡಲು ಅವಕಾಶ ಕೇಳಲಾಗಿದ್ದು, ಅವಕಾಶ ದೊರಕಿದರೆ ಭೇಟಿಯಾಗುವೆವು ಎಂದರು.