ಬೆಂಗಳೂರು: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಸೇರಿದಂತೆ ಬೆಂಗಳೂರಿನ ಐದು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ED) ಗುರುವಾರ ಬೆಳಿಗ್ಗೆ ದಾಳಿ ನಡೆಸಿದೆ. ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ. ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಶೋಧ ಮುಂದುವರಿದಿದೆ.
ಸುಬ್ಬಾರೆಡ್ಡಿ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆಯ ಆರೋಪ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.
ವಿದೇಶಗಳಾದ ಮಲೇಷ್ಯಾ, ಹಾಂಕಾಂಗ್, ಜರ್ಮನಿಯಲ್ಲಿ ಅವರ ಆಸ್ತಿ ಇರುವ ಮಾಹಿತಿ ಲಭ್ಯವಾಗಿದೆ. ವಿದೇಶಿ ಬ್ಯಾಂಕ್ ಖಾತೆ, ಹೂಡಿಕೆ ವಿಚಾರವಾಗಿ ತನಿಖೆ ನಡೆಯುತ್ತಿದೆ. ಉದ್ಯಮ ಪಾಲುದಾರರ ಆಸ್ತಿಗಳ ಕುರಿತು ಕೂಡ ಶೋಧ ನಡೆಸಲಾಗುತ್ತಿದೆ.