ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಕೊಟ್ಟ ದೂರಿನ ತನಿಖೆಯನ್ನು ಎಸ್ಐಟಿ (SIT) ಇಂದಿನಿಂದ ನಡೆಸಲಿದೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆಗೆ ಇಂದು ಎಸ್ಐಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳಿದ್ದು, ಇಂದಿನಿಂದ ತನಿಖೆ ನಡೆಸಲಿದೆ. ಎಸ್ಐಟಿ ಮುಖ್ಯಸ್ಥ ಡಿಜಿಪಿ ಪ್ರಣವ್ ಮೊಹಾಂತಿ ನೇತೃತ್ವದ ಅಧಿಕಾರಿಗಳ ತಂಡವು ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಕ್ವಾಟ್ರಸ್ನಲ್ಲಿ ಎಸ್ಐಟಿ ಕಚೇರಿ ಆರಂಭಿಸಲಿದೆ ಎನ್ನಲಾಗಿದೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ಆದೇಶಿಸಿದೆ.