ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ತನಿಖೆ ನಡೆಸಲು ರಾಜ್ಯ ಸರಕಾರ ನಿಯೋಜಿಸಿರುವ ಎಸ್ಐಟಿ ಎದುರು ದೂರುದಾರ ಹಾಜರಾದ್ರು. ಮಂಗಳೂರಿನ ಕದ್ರಿಯಲ್ಲಿರುವ ಐಬಿ ಕಚೇರಿಯಲ್ಲಿ ತೆರೆದಿರುವ ಎಸ್ಐಟಿ ಕಚೇರಿಗೆ ದೂರುದಾರ ತನ್ನ ಪರ ವಕೀಲರ ಜೊತೆ ಆಗಮಿಸಿದರು.
ಡಿಐಜಿ ಎಂ.ಎನ್.ಅನುಚೇತ್ ಸಮ್ಮುಖದಲ್ಲಿ ದೂರುದಾರನ ವಿಚಾರಣೆ ನಡೆಯುವ ಸಾಧ್ಯತೆಯಿದ್ದು, ವಿಚಾರಣೆಗೆ ಎಸ್ಐಟಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ತನಿಖೆಗೆ ರಾಜ್ಯ ಸರಕಾರವು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್ಐಟಿ)ವನ್ನು ರಚಿಸಿದೆ. ತಂಡದಲ್ಲಿ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್.ಅನುಚೇತ್, ಸಿಎಆರ್ ಕೇಂದ್ರದ ಡಿಸಿಪಿ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಸದಸ್ಯರಾಗಿದ್ದಾರೆ.