ಬೆಂಗಳೂರು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಸೋಮವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 29, 30ರಂದು ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಪೂರ್ವ ಅರಬ್ಬಿ ಸಮುದ್ರದ ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳದ ಅರಬ್ಬಿ ಸಮುದ್ರದಲ್ಲಿ ಟ್ರಫ್ ಇದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಆ.2ರ ವರೆಗೆ ವ್ಯಾಪಕವಾಗಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಜುಲೈ 30ರ ವರೆಗೆ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆ ಇದೆ. ಜುಲೈ 30 ರಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ತಾತ್ಕಾಲಿಕವಾಗಿ ಕಡಿಮೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.