Tuesday, July 29, 2025
Google search engine

Homeರಾಜ್ಯಸುದ್ದಿಜಾಲಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ವರದಾನವಾಗಿವೆ : ಸಿ. ಪುಟ್ಟರಂಗಶೆಟ್ಟಿ

ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ವರದಾನವಾಗಿವೆ : ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ, ಜುಲೈ ೨೮ – ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ವರದಾನವಾಗಿ ಪರಿಣಮಿಸಿವೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.

ತಾಲೂಕಿನ ಚಂದಕವಾಡಿಯ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿಂದು ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಚಂದಕವಾಡಿ ಹೋಬಳಿಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶ ಸ್ವಾತಂತ್ರö್ಯಗೊAಡು ೭೫ ವರ್ಷಗಳಾಗಿದ್ದರೂ ಬಡತನ, ಹಸಿವು ಇನ್ನೂ ಇದೆ. ಇದನ್ನು ಮನಗಂಡಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರ ಬಡತನ ರೇಖೆಗಿಂತ ಕೆಳಗಿರುವ ಜನರನ್ನು ಮೇಲೆತ್ತಲು ಹಾಗೂ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ನೆರವಾಗಲು ಪಂಚ ಗ್ಯಾರಂಟಿ ಗೃಹಲಕ್ಷಿö್ಮÃ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಿದೆ. ಮಾಜಿ ಪ್ರಧಾನಿ ಇಂದಿರಾಗಾAಧಿಯವರ ೨೦ ಅಂಶಗಳ ಕಾರ್ಯಕ್ರಮವು ಪಂಚ ಗ್ಯಾರಂಟಿ ಯೋಜನೆಗಳ ಪರಿಕಲ್ಪನೆಗೆ ಪ್ರೇರಣೆಯಾಗಿದೆ ಎಂದರೆ ತಪ್ಪಾಗಲಾರದು ಎಂದರು.

ಈ ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಂದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಮನಸ್ವಿನಿ ಯೋಜನೆಗಳನ್ನು ಜಾರಿಗೊಳಿಸಿದ್ದರು. ಪ್ರಸ್ತುತ ಸರ್ಕಾರದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ೨೦ ಅಂಶಗಳ ಕಾರ್ಯಕ್ರಮದಡಿ ವೃದ್ಧರಿಗೆ, ಅಂಗವಿಕಲರಿಗೆ ಪಿಂಚಣಿ ದೊರೆಯುತ್ತಿತ್ತು. ಆದರೆ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲಾ ವರ್ಗಗಳನ್ನು ತಲುಪುತ್ತಿವೆ. ಶಕ್ತಿ ಯೋಜನೆಯಡಿ ಮಹಿಳೆಯರು ರಾಜ್ಯದ ಎಲ್ಲೆಡೆ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಗೃಹಲಕ್ಷಿö್ಮÃ ಯೋಜನೆ ಮಹಿಳೆಯರ ಆರ್ಥಿಕವಾಗಿ ಮುಂಚೂಣಿಗೆ ಬರಲು ನೆರವಾಗಿದೆ ಎಂದು ಶಾಸಕರು ತಿಳಿಸಿದರು.

ಪ್ರಸ್ತುತ ಸಿದ್ದರಾಮಯ್ಯ ಅವರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ನಮ್ಮ ಸರ್ಕಾರ ಬಡವರು, ರೈತರು, ಮಹಿಳೆಯರ ಪರವಾಗಿದೆ ಎಂಬುದನ್ನು ಸಾಬೀತುಪಡಿಸಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರವು ಪ್ರತಿವರ್ಷ ೫೫ ಸಾವಿರ ಕೋಟಿಗೂ ಹೆಚ್ಚು ಖರ್ಚು ಮಾಡುತ್ತಿದೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು ಅವರು ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ನೀಡಿದ ಚುನಾವಣಾ ಪೂರ್ವ ಭರವಸೆಯನ್ನು ನೀಡಿದ್ದರು. ಅವುಗಳನ್ನು ಈಡೇರಿಸುವ ಮೂಲಕ ಇಡೀ ದೇಶದಲ್ಲಿಯೇ ಮೊಟ್ಟ ಮೊದಲಬಾರಿಗೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನರ ಆಶೋತ್ತರಗಳಿಗೆ ಪೂರಕವಾಗಿ ಕೆಲಸ ಮಾಡಿದ್ದಾರೆ. ಯೋಜನೆಗಳ ಹಣ ಯಾವುದೇ ಮದ್ಯವರ್ತಿಗಳ ಹಾವಳಿ ಇಲ್ಲದೇ ನೇರ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದೆ. ಮಹಿಳೆಯರು ಆರ್ಥಿಕವಾಗಿ ಸದೃಢರಾಗುತ್ತಿದ್ದಾರೆ ಎಂದರು.

ಶಕ್ತಿ ಯೋಜನೆಯಡಿ ಯಾವುದೇ ಬೇಧ-ಭಾವವಿಲ್ಲದೇ ಎಲ್ಲರಿಗೂ ಕೆ.ಎಸ್.ಆರ್.ಟಿ.ಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಅವಕಾಶ ಕಲ್ಪಿಸಲಾಗಿದೆ. ಅನ್ನಭಾಗ್ಯದಡಿ ಪ್ರತಿ ವ್ಯಕ್ತಿಗೆ ನೀಡುವ ೧೦ ಕೆ.ಜಿ. ಅಕ್ಕಿ ಪ್ರಮಾಣದಲ್ಲಿ ೫ ಕೆ.ಜಿ. ನೀಡಿ ಉಳಿದ ೫ ಕೆ.ಜಿ. ಅಕ್ಕಿಗೆ ಬದಲಾಗಿ ಉಪ್ಪು, ಕಾಳು, ಅಡುಗೆ ಎಣ್ಣೆ ನೀಡಲು ಸರ್ಕಾರದೊಂದಿಗೆ ಚರ್ಚಿಸಲಾಗುವುದು. ಗೃಹಲಕ್ಷಿö್ಮÃ ಯೋಜನೆಯಿಂದ ಮಹಿಳೆಯರಿಗೆ ಪ್ರತಿ ತಿಂಗಳು ೨ ಸಾವಿರ ನಗದು ನೀಡುತ್ತಿದ್ದು, ಈ ಎಲ್ಲಾ ಯೋಜನೆಗಳಿಂದ ಪ್ರತಿಕುಟುಂಬಕ್ಕೆ ತಿಂಗಳಿಗೆ ೪-೫ ಸಾವಿರ ರೂ. ಉಳಿತಾಯವಾಗಲಿದೆ ಎಂದು ಎಚ್.ವಿ. ಚಂದ್ರು ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾದ ಸೋಮೇಶ್ವರ್ ಅವರು ಮಾತನಾಡಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಸರ್ಕಾರ ನುಡಿದಂತೆ ನಡೆದಿದೆ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಸಾಕಷ್ಟು ಅನುಕೂಲಗಳಾಗಿದೆ. ಪಂಚಗ್ಯಾರAಟಿ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳುವುದರ ಮೂಲಕ ಎಲ್ಲಾ ವರ್ಗದ ಜನರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಯೋಜನೆಗಳಿಂದ ತಮಗಾಗಿರುವ ಅನುಕೂಲಗಳ ಬಗ್ಗೆ ಅನಿಸಿಕೆಗಳನ್ನು ಹಂಚಿಕೊAಡರು. ಇದೇ ವೇಳೆ ಗಣ್ಯರು ಯುವನಿಧಿ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದರು.

ಚಾಮರಾಜನಗರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಂಠರಾಜೇ ಅರಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಸಮಿತಿ ಸದಸ್ಯರಾದ ಮರಿಯಾಲದ ಹುಂಡಿ ಕುಮಾರ್, ಮಾದಾಪುರ ಕುಮಾರಸ್ವಾಮಿ, ಚಿನ್ನಸ್ವಾಮಿ, ರಾಜೇಶ್, ರಮೇಶ್, ಮಂಜುಳ, ರಾಜು, ಮಲ್ಲಿಕಾರ್ಜುನ, ಸುಕುಮಾರ್, ಗಣೇಶ್‌ಕುಮಾರ್, ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular