Monday, August 4, 2025
Google search engine

Homeಅಪರಾಧಕಾನೂನುಆ.7ರಂದು ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಆ.7ರಂದು ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲಾ ಲೋಕಾಯುಕ್ತ ಠಾಣಾ ಪೊಲೀಸ್ ಅಧಿಕಾರಿಗಳು ಆ. 7ರ ಗುರುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಚನ್ನಪಟ್ಟಣ ಟೌನ್‌ನಲ್ಲಿರುವ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚನ್ನಪಟ್ಟಣ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಅಂದು ಸಾರ್ವಜನಿಕರು ತಮ್ಮ ಲಿಖಿತ ದೂರು ಮತ್ತು ಸಂಬಂಧಿಸಿದ ದಾಖಲಾತಿ/ಗುರುತಿನ ಚೀಟಿಯ ದ್ವಿಪ್ರತಿಯೊಂದಿಗೆ ಹಾಜರಾಗುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular