Monday, August 4, 2025
Google search engine

Homeಅಪರಾಧಕೊಪ್ಪಳದಲ್ಲಿ ಧರ್ಮ ಸಂಬಂಧಿತ ಪ್ರೇಮಕ್ಕೆ ತೀವ್ರ ರೂಪ: ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಕೊಲೆ

ಕೊಪ್ಪಳದಲ್ಲಿ ಧರ್ಮ ಸಂಬಂಧಿತ ಪ್ರೇಮಕ್ಕೆ ತೀವ್ರ ರೂಪ: ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಕೊಲೆ

ಕೊಪ್ಪಳ: ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದಕ್ಕೆ ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಕೊಲೆ ನಡೆದಿರುವಂತಹ ಘಟನೆ ಭಾನುವಾರ ರಾತ್ರಿ ಕೊಪ್ಪಳ ನಗರದ ವಾರ್ಡ್​ 3ರ ಮಸೀದಿ ಮುಂಭಾಗದಲ್ಲಿ ನಡೆದಿದೆ. ಸಾದಿಕ್ ಕೋಲ್ಕಾರ್​ ಎಂಬುವನಿಂದ ಗವಿಸಿದ್ದಪ್ಪ ನಾಯಕ್​​ನ ಕೊಲೆ ಮಾಡಲಾಗಿದೆ. ಸದ್ಯ ಗವಿಸಿದ್ದಪ್ಪ ನಾಯಕ್ ತಂದೆ ನಿಂಗಜ್ಜ ಟಣಕನಲ್ ಅವರು ಆರೋಪಿ ಸಾದಿಕ್ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ.

ಕೊಲೆ ಮಾಡಿ ಶರಣಾದ ಆರೋಪಿ:

ಗವಿಸಿದ್ದಪ್ಪನನ್ನ ಕೊಲೆ ಮಾಡಿದ ಸಾದಿಕ್​ ನೇರವಾಗಿ ಬಂದು ನಗರ ಠಾಣೆಗೆ ಶರಣಾಗಿದ್ದಾನೆ. ಆತ ಸೇರಿದಂತೆ ನಾಲ್ವರ ವಿರುದ್ಧ ಸೆಕ್ಷನ್​​ 103(1) ಬಿಎನ್​ಎಸ್​ 2023 ಕಲಂ 3(2)ವಿ, ಎಸ್​ಸಿ-ಎಸ್​ಟಿ ಕಾಯ್ದೆ 1989 ಅಡಿಯಲ್ಲಿ ದೂರು ದಾಖಲಾಗಿದೆ.

RELATED ARTICLES
- Advertisment -
Google search engine

Most Popular