ಮಂಗಳೂರು (ದಕ್ಷಿಣ ಕನ್ನಡ): ಧರ್ಮಸ್ಥಳದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಜಯಂತ್ ಟಿ ಎಂಬವರು ಎಸ್‌ಐಟಿಗೆ ದೂರು ಸಲ್ಲಿಸಿದ್ದಾರೆ. ಧರ್ಮಸ್ಥಳ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಗಂಭೀರ ಆರೋಪ ಅವರು ಮಾಡಿದ್ದಾರೆ. ಈ ಬಗ್ಗೆ ಅವರು ಶನಿವಾರ ಎಸ್‌ಐಟಿ ಕಚೇರಿಗೆ ದೂರು ನೀಡಲು ಬಂದು ತಮ್ಮ ಹೇಳಿಕೆ ನೀಡಿದ್ದಾರೆ. ನಂತರ ಧರ್ಮಸ್ಥಳ ಠಾಣೆಗೆ ತೆರಳಿ, ಅಧಿಕೃತವಾಗಿ ದೂರು ನೀಡಿದ್ದಾರೆ.

ಧರ್ಮಸ್ಥಳ ಠಾಣೆಯಲ್ಲಿ 200/DPS/2025 ಎಂಬ ಕ್ರಮಾಂಕದಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತು ತನಿಖೆ ಆರಂಭಿಸಲಾಗಿದೆ. ಮೃತದೇಹವನ್ನು ಹೂತು ಹಾಕಿರುವ ದೃಶ್ಯವನ್ನು ನಾನು ಕಂಡಿದ್ದೇನೆ ಎಂಬುದು ಜಯಂತ್ ಟಿ ಅವರ ದೂರಿನ ಅಂಶ.