ಬೆಂಗಳೂರು: ಇಂದು (ಆ.11)ರಿಂದ ಮುಂದಿನ ಐದು ದಿನಗಳವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್, ಬೆಂಗಳೂರು, ಮೈಸೂರು, ರಾಮನಗರ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಕಳೆದ 2-3 ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಮಧ್ಯಾಹ್ನವೂ ಮಳೆಯ ಅಬ್ಬರ ಇರಲಿದೆ. ಆ.16ರವರೆಗೆ ಇದೇ ಸ್ಥಿತಿ ಮುಂದುವರೆಯಬಹುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.