Thursday, August 14, 2025
Google search engine

Homeಅಪರಾಧಬೆಂಗಳೂರಲ್ಲಿ ಮೊಬೈಲ್ ಕಳವು ಆರೋಪಿ ಬಂಧನ: 80 ಪೋನ್ ವಶಕ್ಕೆ

ಬೆಂಗಳೂರಲ್ಲಿ ಮೊಬೈಲ್ ಕಳವು ಆರೋಪಿ ಬಂಧನ: 80 ಪೋನ್ ವಶಕ್ಕೆ

ಬೆಂಗಳೂರು: ನಗರದಲ್ಲಿ ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧಿಸಲಾಗಿದೆ. ಅಲ್ಲದೇ ಬಂಧಿತ ಆರೋಪಿಯನ್ನು 80 ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ. ಇದರ ಒಟ್ಟು ಮೌಲ್ಯ 7.20 ಲಕ್ಷ ಎಂಬುದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,  ಮಹದೇವಪುರ ಪೊಲೀಸ್ ಠಾಣಾ ಸರಹದ್ದಿನ, ಹೂಡಿಯ ಪಿಜಿಯೊಂದರಲ್ಲಿ ವಾಸವಿರುವ ಪಿರಾದುದಾರರು 0:04/07/2025 ರಂದು ಮಹದೇವಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು, ದಿನಾಂಕ:03/07/2025 ರಂದು ಠಾಣಾ ಸರಹದ್ದಿನ ಹೂಡಿಯಲ್ಲಿರುವ ಹೋಂಡ ಶೋ ರೂಮ್ ಮುಂಭಾಗ ನಡೆದುಕೊಂಡು ಹೋಗುತ್ತಿರುವಾಗ, ಹಿಂಬದಿಯಿಂದ ದ್ವಿ-ಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು, ಪಿರಾದುದಾರರ ಕೈಯಲ್ಲಿದ್ದ ಮೊಬೈಲ್ ಫೋನ್‌ನ್ನು ಕಿತ್ತುಕೊಂಡು ಪರಾರಿಯಾಗಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಫೋನ್ ಸುಲಿಗೆ ಪ್ರಕರಣ ದಾಖಲಾಗಿರುತ್ತದೆ ಎಂದಿದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:25/07/2025 ರಂದು ಹೂಡಿ ಬಸ್ ನಿಲ್ದಾಣದ ಬಳಿ ಪ್ರಕರಣದಲ್ಲಿ ಸುಲಿಗೆಯಾಗಿದ್ದ ಮೊಬೈಲ್ ಫೋನ್ ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಮೊಬೈಲ್ ಫೋನ್ ಸುಲಿಗೆ ಮಾಡಿರುವುದಾಗಿ ಹಾಗೂ ಬೆಂಗಳೂರು ನಗರದ ವಿವಿದ ಕಡೆಗಳಲ್ಲಿ ತನ್ನ ಸಹಚರರಾದ ಮತ್ತಿಬ್ಬರೊಂದಿಗೆ ಸೇರಿಕೊಂಡು ಮೊಬೈಲ್ ಪೋನ್‌ಗಳನ್ನು ಸುಲಿಗೆ ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.

ದಿನಾಂಕ:26/07/2025 ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ 09 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.

ಪೊಲೀಸ್‌ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಸುಲಿಗೆ ಮಾಡುತಿದ್ದ ಮೊಬೈಲ್ ಫೋನ್‌ಗಳನ್ನು ಆರೋಪಿಯು ಸ್ನೇಹಿತನೋರ್ವನ ಮುಖಾಂತರ ಮತ್ತಿಬ್ಬರು ವ್ಯಕ್ತಿಗಳಿಗೆ ಮಾರಾಟ ಮಾಡಿರುವುದಾಗಿ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿ-ಚಕ್ರ ವಾಹನವನ್ನು ಹೆಬ್ಬಾಳದ ಸಹಕಾರನಗರದಲ್ಲಿ ವಾಸವಿರುವ ಆತನ ತಂಗಿಯ ಗಂಡನಿಗೆ ನೀಡಿರುವುದಾಗಿ ತಿಳಿಸಿರುತ್ತಾನೆ.

ತನಿಖೆಯನ್ನು ಮುಂದುವರೆಸಿ, ದಿನಾಂಕ:27/07/2025 80 31/07/2025 ರ ಅವಧಿಯಲ್ಲಿ ಆತನು ಸ್ನೇಹಿತನೋರ್ವನ ಮುಖಾಂತರ ಮತ್ತಿಬ್ಬರು ವ್ಯಕ್ತಿಗಳಿಗೆ ಮಾರಾಟ ಮಾಡಿದ್ದ ಸುಮಾರು 79 ವಿವಿಧ ಕಂಪನಿಯ ಮೊಬೈಲ್ ಫೋನ್‌ಗಳನ್ನು ಹಾಗೂ ಆತನ ತಂಗಿಯ ಗಂಡನಿಗೆ ನೀಡಿದ್ದ ಕೃತ್ಯಕ್ಕೆ ಬಳಸಿದ್ದ 1 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ವ್ಯಕ್ತಿಗಳು ತಲೆಮರೆಸಿಕೊಂಡಿದ್ದು ಅವರುಗಳ ಪತ್ತೆಕಾರ್ಯ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ.

ಈ ಪ್ರಕರಣದ ಆರೋಪಿಯ ಬಂಧನದಿಂದ ಒಟ್ಟು 80 ಮೊಬೈಲ್ ಫೋನ್‌ಗಳು ಹಾಗೂ 1 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ *20,00,000/- (ಇಪ್ಪತ್ತು ಲಕ್ಷ ರೂಪಾಯಿ).

ಈ ಪ್ರಕರಣದ ಆರೋಪಿಯ ಬಂಧನದಿಂದ ಮಹದೇವಪುರ ಪೊಲೀಸ್ ಠಾಣೆಯ-06 ಮೊಬೈಲ್ ಫೋನ್ ಸುಲಿಗೆ ಪ್ರಕರಣಗಳು ಪತ್ತೆಯಾಗಿರುತ್ತವೆ.

ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರಾದ ಕೆ.ಪರಶುರಾಮ್, ಐಪಿಎಸ್, ವೈಟ್ ಫೀಲ್ಡ್ ಉಪ ವಿಭಾಗ, ಸಹಾಯಕ ಪೊಲೀಸ್ ಕಮಿಷನ‌ ವೈಟ್‌ ಫೀಲ್ಡ್ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಮಹದೇವಪುರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಜಿ.ಪ್ರವೀಣ್ ಬಾಬು ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ ಎಂದಿದೆ.

RELATED ARTICLES
- Advertisment -
Google search engine

Most Popular