ಹಾಸನ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆ.16 ರಂದು ಬೆ.11 ಗಂಟೆಗೆ ಹಾಸನಾಂಬ ಕಲಾಕ್ಷೇತ್ರದಲ್ಲಿ ಶ್ರೀ ಕೃಷ್ಣ ಜಯಂತಿಯನ್ನು ಆಯೋಜಿಸಲಾಗಿದೆ.
ಮಾಜಿ ಪ್ರಧಾನ ಮಂತ್ರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ ಅವರು ಘನ ಉಪಸ್ಥಿತಿವಹಿಸಲಿದ್ದಾರೆ. ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಭೈರೇಗೌಡ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ, ಕರ್ನಾಟಕ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿAಗೇಗೌಡ ಅವರು ಗೌರವ ಉಪಸ್ಥಿತಿವಹಿಸಲಿದ್ದಾರೆ, ಶಾಸಕರಾದ ಸ್ವರೂಪ್ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದರಾದ ಶ್ರೇಯಸ್ ಎಂ.ಪಟೇಲ್, ಶಾಸಕರುಗಳಾದ ಹೆಚ್.ಡಿ.ರೇವಣ್ಣ, ಡಾ.ಸಿ.ಎನ್.ಬಾಲಕೃಷ್ಣ, ಎ.ಮಂಜು, ಹೆಚ್.ಕೆ.ಸುರೇಶ್, ಸಿಮೆಂಟ್ ಮಂಜು, ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಡಾ.ಸೂರಜ್ ರೇವಣ್ಣ ಹಾಗೂ ಮಹಾನಗರ ಪಾಲಿಕೆಯ ಮಹಾಪೌರರಾದ ಚಂದ್ರೇಗೌಡ ಎಂ. ಅವರು ಭಾಗವಹಿಸಲಿದ್ದಾರೆ. ಹೊಳೆನರಸೀಪುರ ಬಿ.ಆರ್.ಸಿ ಕೇಂದ್ರದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಂ.ಜಿ ಪರಮೇಶ್ ಮಡಬಲು ಅವರು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲಿದ್ದಾರೆ.