ರಾಮನಗರ:ರಾಜ್ಯ ಮಟ್ಟದ ಟಿಕಿಯೊಂಡೊ (teykyondo) ಕ್ರೀಡೆಯಲ್ಲಿ ರಾಮನಗರ ಜಿಲ್ಲೆಯಿಂದ 30 ಕ್ರೀಡಾಪಟುಗಳು ಭಾಗವಹಿಸಿ 25 ಕ್ರೀಡಾಪಟುಗಳು ಪದಕ ಪಡೆದಿದ್ದು ಅದರಲ್ಲಿ 5 ಕ್ರೀಡಾಪಟುಗಳು ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಅಭಿನಂದಿಸಲಾಯಿತು.
ರಾಮನಗರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ. ಸತೀಶ್ ಅವರು ಮಾತನಾಡಿ, ರಾಷ್ಟ್ರ ಕ್ರೀಡೆಯಲ್ಲಿ ಭಾಗವಹಿಸುವವರಿಗೆ ರಾಜ್ಯದಿಂದ ಜಾಬ್ ರಿಸರ್‌ವೇಷನ್ ಇರುತ್ತದೆ. ಎಲ್ಲರೂ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಇದೇ ಸಂದರ್ಭದಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾದ 5 ಕ್ರೀಡಾಪಟುಗಳಿಗೆ ತಲಾ 1000 ರೂ.ಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಶೋಭಾ, ಉಪನ್ಯಾಸಕರಾದ ವಿಶ್ವನಾಥ್, ಸರ್ಕಾರಿ ನೌಕರರ ಸಂಘ ತಾಲ್ಲೂಕು ಅಧ್ಯಕ್ಷರಾದ ಚಂದ್ರಶೇಖರ್, ತರಬೇತುದಾರರಾದ ಗೋವಿಂದರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.