ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ಭವಿಷ್ಯವನ್ನು ಸುಪ್ರೀಂ ಕೋರ್ಟ್ ನಿರ್ಧರಿಸಲಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯ ತೀರ್ಪು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಲಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದಂತ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿತ್ತು. ವಾದ, ಪ್ರತಿವಾದವನ್ನು ಆಲಿಸಿದ್ದಂತ ಸುಪ್ರೀಂ ಕೋರ್ಟ್, ತೀರ್ಪು ಪ್ರಕಟಿಸುವುದು ಬಾಕಿ ಉಳಿಸಿತ್ತು.
ಇಂದಿನ ಕೇಸ್ ಪಟ್ಟಿಯಲ್ಲಿ ನಟ ದರ್ಶನ್ ಪ್ರಕರಣವನ್ನು ಸುಪ್ರೀಂ ಕೋರ್ಟ್ ಪಟ್ಟಿ ಮಾಡಿದೆ. ಹೆಚ್ಚುವರಿ ಲೀಸ್ಟ್ ನಲ್ಲಿ 3ನೇ ಪ್ರಕರಣವಾಗಿ ತೀರ್ಪು ನೀಡಲು ಸುಪ್ರೀಂ ಕೋರ್ಟ್ ಪಟ್ಟಿಯನ್ನು ರೆಡಿ ಮಾಡಿದೆ. ಹೀಗಾಗಿ ಇಂದು ನಟ ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ಭವಿಷ್ಯವನ್ನು ಸುಪ್ರೀಂ ಕೋರ್ಟ್ ನಿರ್ಧರಿಸಲಿದೆ.
ಅಂದಹಾಗೇ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ನೀಡಲಾಗಿತ್ತು. ಈ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.