Thursday, August 14, 2025
Google search engine

Homeಅಪರಾಧಕಾನೂನುಕಾನೂನಿನ ಮುಂದೆ ಎಲ್ಲರೂ ಸಮಾನರು : ನಟ ದರ್ಶನ್ ಜಾಮೀನು ರದ್ದು ಬೆನ್ನಲ್ಲೇ ರಮ್ಯಾ ಪೋಸ್ಟ್

ಕಾನೂನಿನ ಮುಂದೆ ಎಲ್ಲರೂ ಸಮಾನರು : ನಟ ದರ್ಶನ್ ಜಾಮೀನು ರದ್ದು ಬೆನ್ನಲ್ಲೇ ರಮ್ಯಾ ಪೋಸ್ಟ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಮತ್ತೆ ಜೈಲು ಸೇರೋದು ಮತ್ತೆ ಫಿಕ್ಸ್ ಆಗಿದೆ. ಸುಪ್ರೀಂ ಆದೇಶ ಬೆನ್ನಲ್ಲೇ ಇದೀಗ ನಟಿ ರಮ್ಯಾ ಪೋಸ್ಟ್ ಹಾಕಿ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್ & ಗ್ಯಾಂಗ್ ಜಾಮೀನು ರದ್ದಾಗಿರುವ ಬೆನ್ನಲ್ಲೇ ಇನ್ಸ್ಟಾಗ್ರಾಮ್ ನಲ್ಲಿ ನಟಿ ರಮ್ಯಾ ಪೋಸ್ಟ್ ಹಂಚಿಕೊಂಡಿದ್ದಾರೆ. “ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ನಟಿ ರಮ್ಯಾ ಪೋಸ್ಟ್ ಹಾಕಿದ್ದಾರೆ. ಹಾಗೆಯೇ ಸುಪ್ರೀಂಕೋರ್ಟ್ ಹೊರಡಿಸಿದ ಆದೇಶದ ಮಾಹಿತಿಯ ಪೋಸ್ಟ್ ಹಂಚಿಕೊಂಡಿದ್ದಾರೆ.

ಕಾನೂನಿನ ಮುಂದೆ ಎಲ್ಲರೂ ಸಮಾನರು. ಇಂದು ಬಲವಾದ ಸಂದೇಶ ರವಾನೆಯಾಗಿದೆ. ನ್ಯಾಯವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನ ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ ಎಂದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸುತ್ತದೆ. ನಮ್ಮಲ್ಲಿ ಉಳಿದವರಿಗೆ ನಾನು ಹೇಳಲು ಬಯಸುತ್ತೇನೆ. ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ನ್ಯಾಯ ಸಿಗುತ್ತದೆ. ಮುಖ್ಯವಾಗಿ, ನಿಮ್ಮ ಪ್ರಜ್ಞೆಗೆ ನಿಷ್ಠರಾಗಿರಿ ಎಂದು ನಟಿ ರಮ್ಯಾ ತಿಳಿಸಿದ್ದಾರೆ.

ಇನ್ನು, ಕೂಡಲೇ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ.ಈಗಾಗಲೇ ನಟ ದರ್ಶನ್ ಅಂಡ್ ಗ್ಯಾಂಗ್ ಬಂಧನಕ್ಕೆ ಪೊಲೀಸರು ಕ್ರಮಕೈಗೊಂಡಿದ್ದಾರೆ.ಬೆಂಗಳೂರಿನ ಕಾಮಾಕ್ಷಿಪಾಳ್ಯದ ಪೊಲೀಸರು ಅಲರ್ಟ್ ಆಗಿದ್ದು, ಎಲ್ಲರ ಚಲನವಲನ ಮೇಲೆ ತೀವ್ರ ನಿಗಾಯಿಟ್ಟಿದೆ. ಕೂಡಲೇ ಬಂಧಿಸಲು ಏನೆಲ್ಲಾ ಪ್ರಕ್ರಿಯೆ ಇದೆಯೋ ಅದನ್ನೆಲ್ಲಾ ಪೂರೈಸಿ ಆರೋಪಿಗಳ ಬಳಿ ತೆರಳಲು ಸಿದ್ಧತೆ ನಡೆಸಿದ್ದಾರೆ.

ಇನ್ನು, ಎಲ್ಲಾ ಆರೋಪಿಗಳನ್ನು ಈ ಹಿಂದೆ ಅವರವರು ಇದ್ದ ಜೈಲುಗಳಿಗೆ ರವಾನೆ ಮಾಡಲು ತೀರ್ಮಾನಿಸಲಾಗಿದೆ. ಬಳ್ಳಾರಿ, ತುಮಕೂರು ಹಾಗೂ ಪರಪ್ಪನ ಅಗ್ರಹಾರ ಸೆರೆಮನೆಗೆ ಆದೇಶಾನುಸಾರ ಕಳುಹಿಸಲಾಗುತ್ತದೆ.

ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಜಾಮೀನು ರದ್ದುಗೊಳಿಸುವಂತೆ ಮನವಿ ಮಾಡಿತ್ತು.ಈ ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠವು ವಾದ ಪ್ರತಿವಾದ ಆಲಿಸಿ ತೀರ್ಪನ್ನ ಕಾಯ್ದಿರಿಸಿತ್ತು. ಇದೀಗ ಇಂದು ತೀರ್ಪು ಪ್ರಕಟವಾಗಿದ್ದು ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದುಗೊಳಿಸಿ ಆದೇಶಿಸಿದೆ.

ಎ1 ಪವಿತ್ರಾಗೌಡ, ಎ2 ನಟ ದರ್ಶನ್, ಎ 11 ನಾಗರಾಜು ಅಲಿಯಾಸ್ ನಾಗ ಎ12 ಲಕ್ಷ್ಮಣ್ ಎ7 ಅನುಕುಮಾರ್, ಎ6 ಜಗದೀಶ್ ಎಲ್ಲರ ಜಾಮೀನು ರದ್ದಾಗಿದೆ.ಸಾಕ್ಷ್ಯ ವಿಚಾರಣೆ ಶೀಘ್ರವಾಗಿ ನಡೆಸಲು ನ್ಯಾಯಪೀಠ ಸೂಚನೆ ನೀಡಿದೆ. ಹೈಕೋರ್ಟ್ ಆದೇಶಗಳ ಲೋಪಗಳನ್ನ ಎತ್ತಿ ತೋರಿಸಿದ ಸುಪ್ರೀಂಕೋರ್ಟ್ ಆರೋಪಿ ಎಷ್ಟೇ ದೊಡ್ಡವರಾಗಿದ್ದರೂ ಕಾನೂನಿಗಿಂತ ದೊಡ್ಡವರಲ್ಲ.ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಟೆಂಡೆಂಟ್ ಅನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಜಾಮೀನು ರದ್ದು ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿ 7 ಆರೋಪಿಗಳು ಜೈಲು ಸೇರಲಿದ್ದಾರೆ.

RELATED ARTICLES
- Advertisment -
Google search engine

Most Popular