Thursday, August 14, 2025
Google search engine

Homeಅಪರಾಧರೆಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳ ಜಾಮೀನು ರದ್ದು...

ರೆಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳ ಜಾಮೀನು ರದ್ದು : ಬಂಧನಕ್ಕೆ ಪೊಲೀಸರು ಸಿದ್ಧ

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದನ್ವಯ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆಯಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಆದೇಶದ ಪ್ರತಿಗಾಗಿ ಕಾಯುತ್ತಿದ್ದು, ಅದರಲ್ಲಿರುವ ಅಂಶಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಲ್ಲ ಮೂಲಗಳ ಪ್ರಕಾರ ಮೈಸೂರಿನಿಂದ ತಮಿಳುನಾಡಿನಲ್ಲಿರುವ ದರ್ಶನ್‌ ಸಂಜೆಯ ಹೊತ್ತಿಗೆ ಬೆಂಗಳೂರಿಗೆ ಬರಲಿದ್ದಾರೆ.  ನ್ಯಾಯಾಲಯಕ್ಕೆ ಅವರಾಗಿಯೇ ಶರಣಾದರೆ ಅಲ್ಲಿಯೇ ವಶಕ್ಕೆ ಪಡೆದುಕೊಳ್ಳಲಾಗುವುದು ಇಲ್ಲವೇ ಪೊಲೀಸರೇ ಎಲ್ಲ ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ. ಬಂಧನ ನಂತರ ದರ್ಶನ್‌ ಅವರನ್ನು ಮತ್ತೆ ಬಳ್ಳಾರಿ ಜೈಲಿಗೆ ಕಳುಹಿಸಲಾಗುತ್ತದೆ ಎನ್ನಲಾಗಿದೆ.

ಆರಂಭದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ನ್ಯಾಯಾಂಗ ಬಂಧನದಲ್ಲಿ ಇದ್ದಾಗ ಅವರಿಗೆ ವಿಶೇಷ ಆತಿಥ್ಯ ನೀಡಿದ ಆರೋಪ ಎದುರಾಗಿತ್ತು. ಹೀಗಾಗಿ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸಲಾಗಿತ್ತು.

ಇಂದು ಬೆಳಗ್ಗೆ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಹಾಗೂ ಆರ್. ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠ, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿತ್ತು. ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳನ್ನು ಕೂಡಲೇ ವಶಕ್ಕೆ ಪಡೆಯಬೇಕು ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ನಡೆಸುವಂತೆಯೂ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ.

ಆರೋಪಿಯು ಎಷ್ಟೇ ದೊಡ್ಡವರಾಗಿದ್ದರೂ ಕಾನೂನಿಗಿಂತ ದೊಡ್ಡವರಲ್ಲ.  ಆರೋಪಿಯು ಎಷ್ಟೇ ದೊಡ್ಡವನಾಗಿದ್ದರೂ ಕಾನೂನಿಗಿಂತ ಅತೀತರಲ್ಲ.  ಸ್ಪಷ್ಟ ಆರೋಪಗಳು ಮತ್ತು ವಿಧಿವಿಜ್ಞಾನ ಪರೀಕ್ಷೆಯಲ್ಲಿ  ಆರೋಪಗಳನ್ನು ಸಮರ್ಥಿಸುವ ಸಾಕ್ಷ್ಯಗಳು ಲಭ್ಯವಾಗಿವೆ. ಹೈಕೋರ್ಟ್‌ ಆದೇಶ ದೌರ್ಬಲ್ಯದಿಂದ ಕೂಡಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಆರೋಪಿಗಳ ಜಾಮೀನ ರದ್ದುಪಡಿಸಲಾಗಿದೆ ಎಂದು ನ್ಯಾಯಮೂರ್ತಿ ಜೆ.ಬಿ. ಪರ್ದೀವಾಲಾ ಅವರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಹೈಕೋರ್ಟ್‌ ದರ್ಶನ್ ಹಾಗೂ ಇತರ ಆರೋಪಿಗಳಿಗೆ 2024ರ ಡಿಸೆಂಬರ್ 13ರಂದು ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಜುಲೈ 24ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಆರೋಪಿಗಳಿಗೆ ಜಾಮೀನು ನೀಡಿದ್ದ ಹೈಕೋರ್ಟ್‌ ಅನ್ನು ತರಾಟೆಗೆ ತೆಗೆದುಕೊಂಡಿತ್ತು. ಮತ್ತು ಇಂದಿಗೆ ಆದೇಶವನ್ನು ಕಾಯ್ದಿರಿಸಿತ್ತು.

RELATED ARTICLES
- Advertisment -
Google search engine

Most Popular