Monday, August 18, 2025
Google search engine

Homeಅಪರಾಧಬೆಂಗಳೂರು ಅಗ್ನಿ ಅವಘಡದಲ್ಲಿ 5 ಮಂದಿ ಸಜೀವದಹನ ಕೇಸ್ : ಕಟ್ಟಡ ಮಾಲೀಕ ಸೇರಿ ಇಬ್ಬರು...

ಬೆಂಗಳೂರು ಅಗ್ನಿ ಅವಘಡದಲ್ಲಿ 5 ಮಂದಿ ಸಜೀವದಹನ ಕೇಸ್ : ಕಟ್ಟಡ ಮಾಲೀಕ ಸೇರಿ ಇಬ್ಬರು ಬಂಧನ

ಬೆಂಗಳೂರು: ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಟ್ಟಡ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಐವರನ್ನು ಬಲಿ ಪಡೆದಿದ್ದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಾಲಕೃಷ್ಣ ಶೆಟ್ಟಿ ಮತ್ತು ಸಂದೀಪ್ ಶೆಟ್ಟಿ ಎಂದು ಗುರುತಿಸಲಾಗಿದೆ. ಮೃತನ ಸೋದರ ಗೋಪಾಲ್ ಸಿಂಗ್ ದೂರಿನ ಮೇರೆಗೆ ಕಟ್ಟಡದಲ್ಲಿ ಅಗ್ನಿ ಸುರಕ್ಷತಾ ವ್ಯವಸ್ಥೆ ಕಲ್ಪಿಸದ ಆರೋಪದ ಮೇರೆಗೆ ಇಬ್ಬರು ಕಟ್ಟಡ ಮಾಲೀಕರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕರಾದ ಬಾಲಕೃಷ್ಣಯ್ಯ ಶೆಟ್ಟಿ, ಸಂದೀಪ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಕಟ್ಟಡದಲ್ಲಿ ಅಗ್ನಿ ಅವಘಡ ತಪ್ಪಿಸಲು ಸಾಮಾನ್ಯ ಸೇಫ್ಟಿ ಸಹ ಇರಲಿಲ್ಲ. ಈ ಕಾರಣಕ್ಕಾಗಿ ಕಟ್ಟಡದ ಮಾಲೀಕರನ್ನು ಬಂಧಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಹಕಾಯ್ ತಿಳಿಸಲಾಗಿದೆ.

RELATED ARTICLES
- Advertisment -
Google search engine

Most Popular