ದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ. ಇಂಡಿಯಾ ಮೈತ್ರಿಕೂಟ ತನ್ನ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರನ್ನು ಆಯ್ಕೆ ಮಾಡಿದೆ.
ದೆಹಲಿಯಲ್ಲಿ ನಡೆದ ಮೈತ್ರಿಕೂಟದ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಘೋಷಿಸಿದರು. ರೆಡ್ಡಿ ಅವರು 2007ರಿಂದ 2011ರವರೆಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿದ್ದರು. ಎನ್ಡಿಎ ತನ್ನ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಹಾಗೂ ಆರ್ಎಸ್ಎಸ್ ಹಿನ್ನಲೆಯ ಸಿ.ಪಿ. ರಾಧಾಕೃಷ್ಣನ್ ಅವರನ್ನು ಘೋಷಿಸಿದೆ. ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನಾಂಕವಾಗಿದೆ.