ರಾಮನಗರ: ರಾಮನಗರ ತಾಲ್ಲೂಕು ಪಂಚಾಯತ್ ಹಾಗೂ ರಾಮನಗರ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆ. 20ರ ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಡಿ. ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಕೆ. ರಾಜು ಅವರು ಡಿ. ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ರೈಡ್ ನಾಗರಾಜ್, ಶ್ರೀನಿವಾಸ್, ಮಂಟದಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಲಾಲ್, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಧುಮಾಲ, ಸಮುದಾಯದ ಮುಖಂಡರುಗಳು ಹಾಗೂ ಇತರರು ಉಪಸ್ಥಿತರಿದ್ದರು.