ರಾಮನಗರ: ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ನಾಗರೀಕ ಹಕ್ಕು ಸಂರಕ್ಷಣಾ ಕಾಯ್ದೆ-1955 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ತಿದ್ದುಪಡಿ ಅಧಿನಿಯಮ ಹಾಗೂ ಇತರೆ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಕಾರ್ಯಗಾರ/ವಿಚಾರ ಗೋಷ್ಠಿಗಳನ್ನು ಆಯೋಜಿಸುವ ಸಂಬಂಧ ಸರ್ಕಾರಿ ಆದೇಶ ಸಂ:ಸಕಇ 316 ಎಸ್‌ಎಲ್‌ಪಿ 2024, ದಿನಾಂಕ: 15.10.2024ರಲ್ಲಿ ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಯನುಸಾರ ಅರ್ಹ ಸ್ವಯಂ ಸೇವಾ ಸಂಘ-ಸಂಸ್ಥೆಗಳನ್ನು ಗುರುತಿಸಿ ನೇಮಕ ಮಾಡಲು, ಅರ್ಹ ಸ್ವಯಂ ಸೇವಾ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಚ್ಛೆಯುಳ್ಳ ಅರ್ಹ ಸ್ವಯಂ ಸೇವಾ ಸಂಘ ಸಂಸ್ಥೆಗಳು ನಿಬಂಧನೆಗಳಿಗೊಳಪಟ್ಟು 2025ರ ಸೆಪ್ಟೆಂಬರ್ 4ರ ಸಂಜೆ 5 ಗಂಟೆಯೊಳಗೆ ನಿಗದಿತ ಅರ್ಜಿ ನಮೂನೆಯಲ್ಲಿ ಪೂರ್ಣ ವಿವರವನ್ನು ನಮೂದಿಸಿ, ಪೂರಕ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ, ಜಿಲ್ಲಾ ಪಂಚಾಯತ್ ಭವನ, ರಾಮನಗರ ಅಥವಾ ಸಂಬಂಧಪಟ್ಟ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಾಮನಗರ, ಚನ್ನಪಟ್ಟಣ, ಕನಕಪುರ ಅಥವಾ ಮಾಗಡಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ, ಜಿಲ್ಲಾ ಪಂಚಾಯತ್ ಭವನ, ರಾಮನಗರ ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲ್ಲೂಕು ಇವರನ್ನು ಸಂಪರ್ಕಿಸುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.