ಚಾಮರಾನಗರ : ತವರು ಮನೆಗೆ ಕರೆಯುವವರು ಯಾರೂ ಇಲ್ಲ ಎಂದು ನೊಂದ ಗೃಹಿಣಿ ನೇಣಿಗೆ ಕೊರಳೊಡ್ಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು 26 ವರ್ಷದ ರಶ್ಮಿ ಎಂದು ಗುರುತಿಸಲಾಗಿದೆ. ಮಧುವನಹಳ್ಳಿ ಗ್ರಾಮದ ಸಿದ್ದರಾಜು ಜೊತೆ ರಶ್ಮಿ ವಿವಾಹ ನಡೆದಿತ್ತು.
ರಶ್ಮಿಯ ತಂದೆ, ತಾಯಿ ಹಾಗೂ ಅಣ್ಣ ಈಗಾಗಲೇ ಮೃತಪಟ್ಟಿದ್ದಾರೆ. ತವರಿಗೆ ಕರೆದು ಅರಿಶಿನ-ಕುಂಕುಮ ಕೊಡಲು ಯಾರೂ ಇಲ್ಲ ಎನ್ನುವ ಕಾರಣಕ್ಕೆ ರಶ್ಮೀ ಜೀವನದಲ್ಲಿ ಜಿಗುಪ್ಸೆಗೊಂಡಿದ್ದಳು. ಇದರಿಂದಾಗಿ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ.
ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇಡೀ ರಾಜ್ಯ ಗೌರಿ ಗಣೇಶ ಹಬ್ಬದ ಸಂಭ್ರಮದಲ್ಲಿದೆ. ಎಲ್ಲರೂ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಆದರೆ, ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಮನೆಯಲ್ಲಿ ಶೋಕ ಆವರಿಸಿದೆ.