Tuesday, September 2, 2025
Google search engine

Homeಅಪರಾಧಮಂಗಳೂರಿನಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ: ಇಬ್ಬರು ಆರೋಪಿಗಳು ಬಂಧನ

ಮಂಗಳೂರಿನಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ: ಇಬ್ಬರು ಆರೋಪಿಗಳು ಬಂಧನ

ಮಂಗಳೂರು (ದಕ್ಷಿಣ ಕನ್ನಡ : ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ.

ಫಝಲ್ ಹುಸೇನ್(33) ಮತ್ತು ನೌಶಾದ್(32) ಬಂಧಿತರು. ಇವ್ರಿಂದ 15 ಗ್ರಾಂ ಎಂಡಿಎಂಎ, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಇದ್ರ ಅಂದಾಜು ಮೌಲ್ಯ 95500/-ರೂಪಾಯಿ. ಇವುಗಳನ್ನು ಪಂಚನಾಮೆ ಮೂಲಕ ಅಮಾನತ್ತು ಪಡಿಸಿಕೊಂಡು, ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣಾ Cr. No. 155/25 U/S NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕಾರ್ಯಾಚರಣೆಯು ಎಸಿಪಿ ವಿಜಯಕ್ರಾಂತಿ ಕೆ ಎಸ್ ಪಿ ಎಸ್ ರವರ ಮಾರ್ಗದರ್ಶನ ಹಾಗೂ ನಿರ್ದೇಶನದಂತೆ ಉಳ್ಳಾಲ ಪೊಲೀಸ್ ಠಾಣಾ ಸಿಬ್ಬಂದಿಗಳಿಂದ ಯಶಸ್ವಿಯಾಗಿ ಕೈಗೊಳ್ಳಲಾಯಿತು.

RELATED ARTICLES
- Advertisment -
Google search engine

Most Popular